ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 JANUARY 2023
ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು (misfire) ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ. ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ.
ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು (misfire) ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು.
ಇದನ್ನೂ ಓದಿ – ಹೊಸ ವರ್ಷದ ಪಾರ್ಟಿ ವೇಳೆ ಗನ್ ಫೈರ್, ಯುವಕನಿಗೆ ಗಾಯ, ಗುಂಡು ಹಾರಿಸಿದವ ಸಾವು
ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವಿನಯ್ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422