ಶಿವಮೊಗ್ಗ ಲೈವ್.ಕಾಂ | SHIMOGA | 27 ಸೆಪ್ಟೆಂಬರ್ 2019

ವೈದ್ಯರ ನಿರ್ಲಕ್ಷ್ಯಕ್ಕೆ ಶಿವಮೊಗ್ಗ ವಿದ್ಯಾನಗರದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
![]() |
ಪ್ರತಾಪ್ ಸಿಂಗ್ (23) ಮೃತ ಯುವಕ. ಮೂರು ವರ್ಷದ ಹಿಂದೆ ಅಪಘಾತಕ್ಕೀಡಾಗಿ ಪ್ರತಾಪ್ ಸಿಂಗ್ ಗಾಯಗೊಂಡಿದ್ದರು. ಅದರ ಮುಂದುವರೆದ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೆ.24ರಂದು ಆಪರೇಷನ್ ಮಾಡಲಾಗಿತ್ತು. ಮರುದಿನ ಪ್ರತಾಪ್ ಸಿಂಗ್’ನನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಮನೆಗೆ ಹಿಂತಿರುಗುವಾಗ ಪ್ರತಾಪ್ ಸಿಂಗ್ ಹಲವು ಬಾರಿ ವಾಂತಿ ಮಾಡಿಕೊಂಡಿದ್ದಾನೆ. ಪ್ರತಾಪ್ ಸಿಂಗ್ ಅಸ್ವಸ್ಥಗೊಂಡಿರುವ ವಿಚಾರ ತಿಳಿಯುತ್ತಿದ್ದಂತೆ ಚಿಕಿತ್ಸೆ ನೀಡಿದ ವೈದ್ಯರು ಮಾತ್ರೆ ತೆಗೆದುಕೊಳ್ಳುವಂತೆ ವಾಟ್ಸಪ್ ಮಾಡಿದ್ದರು. ಆ ಮಾತ್ರೆ ಸೇವಿಸಿ ಮಲಗಿದ್ದ ಪ್ರತಾಪ್ ಸಿಂಗ್’ಗೆ ಉಸಿರಾಟದ ಸಮಸ್ಯೆ ಎದುರಾಗಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಕರೆದೊಯ್ದಾಗ ಪ್ರತಾಪ್ ಸಿಂಗ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಮತ್ತು ಸಂಬಂಧಿಕರು ಮಣಿಪಾಲ ಆಸ್ಪತ್ರೆ ಮತ್ತು ವೈದ್ಯರ ವಿರುದ್ಧ ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200