ಶಿವಮೊಗ್ಗದಲ್ಲಿ ತುಂಗಾ ನದಿಗೆ ಬಿದ್ದ ಯುವಕ, ಎರಡು ಗಂಟೆ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021

ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಕಾಲು ಜಾರಿ ಹೊಳೆಗೆ ಬಿದ್ದಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ.

ಚಿತ್ರದುರ್ಗ ಜಿಲ್ಲೆಯ ಬೆನಕಹಳ್ಳಿಯ ನವೀನ್ (32) ಮೃತ ದುರ್ದೈವಿ. ತುಂಗಾ ನದಿಯಲ್ಲಿ ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿ ಹೊಳೆಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಎರಡು ಗಂಟೆ ಕಾರ್ಯಾಚರಣೆ

ಅಗ್ನಿಶಾಮಕ ಸಬ್ಬಂದಿಗಳು ನವೀನ್ ಬಿದ್ದ ಜಾಗದ ಸುತ್ತಲು ಶೋಧ ಕಾರ್ಯ ನಡೆಸಿದರು. ಸತತ ಎರಡು ಗಂಟೆ ಕಾರ್ಯಾಚರಣೆ ಬಳಿಕ ನವೀನ್ ಮೃತದೇಹ ಪತ್ತೆಯಾಗಿದೆ.

ಚಿತ್ರದುರ್ಗದ ನವೀನ್ ಇಲ್ಲಿನ ಅಡಕೆ ತೋಟವೊಂದರಲ್ಲಿ ಕೆಲಸಕ್ಕೆ ಬಂದಿದ್ದರು. ಬಿಡುವು ಇದ್ದ ಕಾರಣ ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್ ಕುಮಾರ್, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

201421733 1138954733251102 9013304741762151542 n.jpg? nc cat=110&ccb=1 3& nc sid=8bfeb9& nc ohc=9tJivDm38zIAX W2r9 & nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment