ಶಿವಮೊಗ್ಗದಲ್ಲಿ ತುಂಗಾ ನದಿಗೆ ಹಾರಿ ಹುಚ್ಚಾಟ, ಪೊಲೀಸರಿಗೆ ಸಿಕ್ಕಿಬಿದ್ದ ಯುವಕ, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 26 JULY 2023

SHIMOGA : ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಜಿಗಿದು (jumped) ಈಜುತ್ತಿದ್ದ ಯುವಕನನ್ನು ಪೊಲೀಸರು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಿದ್ದಾರೆ. ಆತನ ವಿರುದ್ಧ ಲಘು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Youth-jumped-to-tunga-river-brought-to-Tunga-River

ಯಾರು ಆ ಯುವಕ?

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದವನನ್ನು (jumped) ಗಂಗಪ್ಪ ಅಲಿಯಾಸ್‌ ಅಂಗೂರ್‌ ಎಂದು ಗುರುತಿಸಲಾಗಿದೆ. ಈತ ಶಿವಮೊಗ್ಗದ ರಾಜೀವ್‌ ಗಾಂಧಿ ಬಡಾವಣೆ ನಿವಾಸಿ. ತಾನು ನುರಿತ ಈಜುಗಾರ ಎಂದು ಪೊಲೀಸರ ಮುಂದೆ ಹೇಳಿದ್ದಾನೆ. ಆದರೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹೊಳೆಯಲ್ಲಿ ಈಜಲು ಹಾರಿ ನಿರ್ಲಕ್ಷ್ಯ ತೋರಿದ್ದರಿಂದ ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ

ವಿಡಿಯೋ ವೈರಲ್‌

ಗಂಗಪ್ಪ ಅಲಿಯಾಸ್‌ ಅಂಗೂರ್‌ ಶಿವಮೊಗ್ಗದ ಹೊಸ ಸೇತುವೆ ಮೇಲಿನಿಂದ ಹೊಳಗೆ ಜಿಗಿದು ಈಜಾಡಿದ್ದ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಇದರ ಬೆನ್ನಿಗೆ ಕೋಟೆ ಠಾಣೆ ಇನ್ಸ್‌ಪೆಕ್ಟರ್‌ ಶಿವಪ್ರಸಾದ್‌ ರಾವ್‌ ಅವರು ವಿಡಿಯೋ ಪರಿಶೀಲನೆ ನಡೆಸಿ ಗಂಗಪ್ಪನನ್ನು ಠಾಣೆಗೆ ಕರೆತಂದು ಎಚ್ಚರಿಕೆ ನೀಡಿದ್ದಾರೆ.

Parishrama Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment