ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 MARCH 2023
SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ನಿಂತು ಯುವಕನೊಬ್ಬ ಆಜಾನ್ (Azan) ಕೂಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ, ವಿರೋಧ ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ಪ್ರಕರಣ ದಾಖಲು ಮಾಡಿಕೊಂಡಿದೆ.
ಏನಿದು ಘಟನೆ?
ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಮಾವೇಶವೊಂದರಲ್ಲಿ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಮುಸ್ಲಿಂ ಸಮುದಾಯದ ಯುವಕರು ಮಾರ್ಚ್ 17ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನೆಡಸಿದ್ದರು. ಈ ವೇಳೆ ರಾಗಿಗುಡ್ಡದ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ನಿಂತು ಅಜಾನ್ (Azan) ಕೂಗಿದ್ದ. ಮೊಬೈಲ್ ಮೂಲಕ ಇದರ ಚಿತ್ರೀಕರಣ ಮಾಡಲಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವೈರಲ್ ಆಯ್ತು ವಿಡಿಯೋ
ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋಗಳನ್ನು ಎಡಿಟ್ ಮಾಡಿ ಹರಿಬಿಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಪರ, ವಿರೋಧ ಚರ್ಚೆಗಳು ನಡೆಯುತ್ತಿದೆ.
ಪ್ರಕರಣ ದಾಖಲಿಸಿದ ಪೊಲೀಸ್
ಇನ್ನು, ಡಿಸಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿರುವ ಘಟನೆ ಸಂಬಂಧ ಮುಂಜಾಗ್ರತ ಕ್ರಮವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವ್ಯಕ್ತಿಯೊಬ್ಬನು ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಂತು ಆಜಾನ್ ಕೂಗಿದ ಘಟನೆಗೆ ಸಂಬಂಧಿಸಿದಂತೆ, ಆ ವ್ಯಕ್ತಿಯನ್ನು ಕರೆದು ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಮುಂಜಾಗ್ರತವಾಗಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಸಮಯದಲ್ಲಿ ಹಾಜರಿದ್ದ ವ್ಯಕ್ತಿಗಳ ಪೂರ್ವಪರದ ಮಾಹಿತಿ ಕಲೆಹಾಕಲಾಗುತ್ತಿದೆ. ಸದರಿ ಮಾಹಿತಿಯ ಆಧಾರದ ಮೇಲೆ ಅವರುಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್