ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 15 JUNE 2023
ಮಾರಕಾಸ್ತ್ರದಿಂದ (Lethal Weapon) ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಲಿ ವಾಸಿ ಆಸಿಫ್ (25) ಹತ್ಯೆಯಾದವನು. ಜಬಿ (25) ಎಂಬಾತ ಕೊಲೆ ಮಾಡಿದವನು. ಇಲಿಯಾಸ್ ನಗರದ 100 ಅಡಿ ರಸ್ತೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ – ಹಣಗೆರೆ ಕಟ್ಟೆಯಲ್ಲಿ ಪೊಲೀಸ್ ಇಲಾಖೆ ಮಹತ್ವದ ಸಭೆ, 7 ಪ್ರಮುಖ ನಿರ್ಧಾರ ಪ್ರಕಟ, ಏನೇನು?
100 ಅಡಿ ರಸ್ತೆಯ ಫುಟ್‌ಪಾತ್ ಮೇಲೆ ಆಸಿಫ್‌ನ ತಲೆ ಹಿಂಭಾಗಕ್ಕೆ ಮಾರಕಾಸ್ತ್ರದಿಂದ (Lethal Weapon) ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು.
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422