SHIVAMOGGA LIVE NEWS, 3 JANUARY 2024
ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ (Agriculture) ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ 10ನೇ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವ ಯುವ ಸವಿಷ್ಕಾರ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯುವಜನೋತ್ಸವ ವಿಶೇಷ ಮತ್ತು ಅಪರೂಪದ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ. ಕೃಷಿಯಲ್ಲಿ ಸಹ ಉತ್ತಮ ಸಾಧನೆ ತೋರಬಹುದು. ವಿದ್ಯಾರ್ಥಿಗಳು ತಮ್ಮ ಕನಸು ಮತ್ತು ಗುರಿ ಸಾಧಿಸಲು ದೃಢ ಹೆಜ್ಜೆ ಇಡಬೇಕು. ಶಾರದಾ ಪೂರ್ಯಾನಾಯ್ಕ್, ಶಾಸಕಿ
ವಿದ್ಯಾರ್ಥಿಗಳಿಗೆ ಓದಿನಷ್ಟೆ ಪ್ರತಿಭೆ ಅನಾವರಣವು ಮುಖ್ಯ. ಸಮಾಜದಲ್ಲಿ ಒಂದಿಲ್ಲೊಂದು ಕ್ಷೇತ್ರದಲ್ಲಿ ನಾವು ಗುರುತಿಸಿಕೊಳ್ಳಲು ಹಗಲು ರಾತ್ರಿ ಶ್ರಮಿಸಬೇಕು. ನಮ್ಮ ಗುರಿ ತಲುಪುವವರೆಗೆ ನಿಲ್ಲಬಾರದು. ದಿಲೀಪ್ ಪ್ರಕಾಶ್, ಚಲನಚಿತ್ರ ನಟ
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರ ಇದ್ದು, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮನಸ್ಸು ಹಾಗೂ ದೇಹವನ್ನು ಸದೃಢಗೊಳಿಸುತ್ತವೆ. ಸಾಧನೆಗೆ ಸಹಕಾರಿಯಾಗಿದೆ. ಡಾ.ಬಿ.ಕೆ.ಕುಮಾರಸ್ವಾಮಿ, ವ್ಯವಸ್ಥಾಪನಾ ಮಂಡಳಿ ಸದಸ್ಯ
ಶಿಕ್ಷಣ ತಜ್ಞ ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ.ಪಿ.ಕೆ.ಬಸವರಾಜ ಯುವ ಸವಿಷ್ಕಾರದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ, ಮಾಜಿ ಕುಲಪತಿ ಡಾ.ವಾಸುದೇವಪ್ಪ, ಡೀನ್ಗಳಾದ ಡಾ.ಎನ್.ಎಸ್.ಮಾವರ್ಕರ್, ಡಿ.ತಿಪ್ಪೇಶ್, ಶಿಕ್ಷಣ ನಿರ್ದೇಶಕ ಹೇಮ್ಲಾನಾಯ್ಕ, ಡಾ.ಧನಂಜಯ ನಾಯಕ್, ಡಾ. ಶಶಿಧರ್, ಡಾ. ದುಷ್ಯಂತ ಕುಮಾರ್, ಡಾ.ಬಿ.ಕೆ.ಶಿವಣ್ಣ, ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ » ಹೆಚ್.ಟಿ.ಬಳಿಗಾರ್ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ