‘ಜ್ಞಾನ ದೇಗುಲ’ ಘೋಷಣೆ ಬದಲು, ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 FEBRUARY 2024

SHIMOGA : ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಘೋಷಣೆಯನ್ನು ಬದಲಿಸಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ ಎಂಬ ಘೋಷಣೆ ಪ್ರಕಟಿಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಶಿವಮೊಗ್ಗ ನಗರ ಯುವ ಮೋರ್ಚಾದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯವನ್ನು ತೆಗೆದು ಹಾಕಿರುವ ಸರ್ಕಾರ ಅವರಿಗೆ ಅಪಮಾನ ಮಾಡಲಾಗುತ್ತಿದೆ. ಈ ಹಿನ್ನೆಲೆ ಸಚಿವ ಮಹದೇವಪ್ಪ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಮ ಕೈಗೊಳ್ಳಬೇಕು ಎಂದು ಯುವ ಮೋರ್ಚಾ ಆಗ್ರಹಿಸಿದೆ.

ಯಾರೆಲ್ಲ ಏನೇನು ಹೇಳಿದರು?

ಚನ್ನಬಸಪ್ಪ, ಶಿವಮೊಗ್ಗ ಶಾಸಕ : ಸಂಸ್ಕಾರದ ಭಾಗಗಳನ್ನು ಕಿತ್ತೆಸೆಯುವುದು ಕಾಂಗ್ರೆಸ್ ಸರ್ಕಾರದ ಮನಸ್ಥಿತಿ. 1928ರಲ್ಲಿ ಕುವೆಂಪು ಅವರು ಸೋಮನಾಥ ದೇಗುಲಕ್ಕೆ ಹೋದಾಗ ಭಾವುಕರಾಗಿ ಬರೆದ ಗೀತೆಯ ಸಾಲು ಇದು. ಆ ಗೀತೆಯಿಂದ ಪ್ರೇರಣೆ ಪಡೆಯಬೇಕು ಹೊರತು ತಿರುಚುವ ಪ್ರಯತ್ನ ಮಾಡಬಾರದು. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಹೊಲಸು ಮಾಡುತ್ತಿದೆ. ಸಂವಿಧಾನದಲ್ಲಿ ಪ್ರಶ್ನಿಸುವ ಹಕ್ಕಿದೆ ಎಂದು ಸರ್ಕಾರ ಹೇಳಿದೆ. ಆದರೆ ಎಲ್ಲಿ ಏನು ಮಾಡಬೇಕು ಅಂತಾ ಸಂವಿಧಾನ ಹೇಳಿದೆ. ಇದರ ಹೊರತು ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು.

BJP Yuva Morcha

ಸಿದ್ರಾಮಣ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯ : ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ. ಯಾರನ್ನು ಪ್ರಶ್ನಸುವುದು‌. ಪಾಠ ಅರ್ಥವಾಗದೆ ಇದ್ದರೆ ಪ್ರಶ್ನಿಸಬೇಕು. ಇದರ ಹೊರತು ಇನ್ನೇನನ್ನು ಪ್ರಶ್ನಿಸಬೇಕಿದೆ. ಅವೈಜ್ಞಾನಿಕವಾದ ನಿರ್ಧಾರವನ್ನು ಕೈ ಬಿಡಬೇಕು.

BJP Yuva morcha

ಯುವ ಮೋರ್ಚಾ ನಗರ ಅಧ್ಯಕ್ಷ ರಾಹುಲ್‌ ಪಿ.ಬಿದರೆ, ಪ್ರಧಾನ ಕಾರ್ಯದರ್ಶಿ ಯುವರಾಜ್‌, ಅಭಿಷೇಕ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – SSLC, PUC ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ ಪರೀಕ್ಷೆ, ಯಾವಾಗ ನಡೆಯುತ್ತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 20, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment