ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, ಯಾರೆಲ್ಲ ಭಾಗಿಯಾಗಲಿದ್ದಾರೆ? ಏನೆಲ್ಲ ಕಾರ್ಯಕ್ರಮ ಇರುತ್ತೆ?

SHIVAMOGGA LIVE NEWS | 12 SEPTEMBER 2023

SHIMOGA : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.13ರಂದು ಬೆಳಿಗ್ಗೆ 10 ಗಂಟೆಗೆ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ (Vokkaliga) ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್‌, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ 125 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಾಹಧನ, ಸಾಧಕರಿಗೆ ಸನ್ಮಾನ ಹಾಗೂ ಒಕ್ಕಲಿಗ ಸಮುದಾಯದ 30 ಜನ ಅಂಗವಿಕಲರಿಗೆ ಗಾಲಿ ಕುರ್ಚಿ, ವಾಕರ್, ವಾಕಿಂಗ್‌ ಸ್ಟಿಕ್ ವಿತರಿಸಲಾಗುವುದು ಎಂದರು.

ಉದ್ಘಾಟನೆಗೆ ಡಿ.ಕೆ.ಶಿವಕುಮಾರ್‌

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ LIC-HOME-NEW-ADVTಸ್ವಾಮೀಜಿ ಸಮಾವೇಶದ ಸಾನ್ನಿಧ್ಯ ವಹಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಆರಗ ಜ್ಞಾನೇಂದ್ರ, ಎಂಎಲ್‌ಸಿ ಭೋಜೇಗೌಡ, ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಹನುಮಂತಯ್ಯ, ನಿರ್ದೇಶಕರಾದ ಉಮಾಪತಿ ಶ್ರೀನಿವಾಸ ಗೌಡ, ಸಿರಿಬೈಲು ಧರ್ಮೇಶ್, ಜಿಲ್ಲಾಧ್ಯಕ್ಷ ಆದಿಮೂರ್ತಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಕಾಂಗ್ರೆಸ್ ಜಿಲಾಧ್ಯಕ್ಷ ಸುಂದರೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಆರ್.ಎಂ. ಮಂಜುನಾಥ ಗೌಡ, ದುಗ್ಗಪ್ಪ ಗೌಡ, ಯೋಗೇಶ್ ಗೌಡ, ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಆರ್.ವಿಜಯಕುಮಾರ್ ಭಾಗವಹಿಸುವರು ಎಂದು ತಿಳಿಸಿದರು.

ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ

ಸುದ್ದಿಗೋಷ್ಠಿಯಲ್ಲಿ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎ. ರಮೇಶ್ ಹೆಗಡೆ, ಉಪಾಧ್ಯಕ್ಷ ಗುರುರಾಜ ಗೌಡ, ಪ್ರಧಾನ ಕಾರ್ಯದರ್ಶಿ ರಘುಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ಖಜಾಂಚಿ ಸುನಿಲ್ ಗೌಡ, ನಿರ್ದೇಶಕ ಅರುಣ್ ಗೌಡ, ಹರ್ಷಿತ್ ಗೌಡ ಇದ್ದರು.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 12, 2023 at 12:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 12, 2023

Leave a Comment