ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 9 DECEMBER 2024
ಶಿವಮೊಗ್ಗ : ಅನಾರೋಗ್ಯ ಪೀಡಿತ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್‌ನಲ್ಲಿ (Zero Traffic) ಮಣಿಪಾಲ್ ಆಸ್ಪತ್ರೆಗೆ ಭಾನುವಾರ ರವಾನೆ ಮಾಡಲಾಯಿತು. ಉಸಿರಾಟ ಸಂಬಂಧಿ ಕಾಯಿಲೆಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಸಾಗರ ಮೂಲದ ಸುಮಂಗಳಾ ಹಾಗೂ ಲೋಕೇಶ್ ದಂಪತಿಗೆ ಐದು ದಿನದ ಹಿಂದೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ಹುಟ್ಟುವಾಗಲೇ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಶಿಶುವನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಐದು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ. ಹಾಗಾಗಿ ವೈದ್ಯರ ಸೂಚನೆಯಂತೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದು ಪಾಲಕರ ಮನವಿ ಮೇರೆಗೆ ಪೊಲೀಸ್ ಇಲಾಖೆಯು ಜೀರೋ ಟ್ರಾಫಿಕ್‌ನಲ್ಲಿ ಶಿಶುವನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿತ್ತು.
ಇದನ್ನೂ ಓದಿ » ಶಿವಮೊಗ್ಗದ ಜನರೆ ಹುಷಾರ್, ಇಲ್ಲಿದೆ ಟಾಪ್ 5 ವಂಚನೆ ಲಿಸ್ಟ್, ಇವರ ಬಲೆಗೆ ಬಿದ್ದರೆ ಸಂಕಷ್ಟ ಫಿಕ್ಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422