ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 APRIL 2023
SHIMOGA : ನ್ಯಾಮತಿ ತಾಲೂಕು ಜೀನಹಳ್ಳಿಯಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ತುತ್ತಾಗಿದ್ದ ಸಕ್ರೆಬೈಲು ಬಿಡಾರದ ವೈದ್ಯ ಡಾ.ವಿನಯ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿಶೇಷ ಆಂಬುಲೆನ್ಸ್ ಮೂಲಕ ಜೀರೋ ಟ್ರಾಫಿಕ್‍ನಲ್ಲಿ (Zero Traffic) ಡಾ.ವಿನಯ್ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕಾಡಾನೆ ದಾಳಿಗೆ ಡಾ.ವಿನಯ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಅವರನ್ನು ಬೆಂಗಳೂರಿನ (Zero Traffic) ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
ವಿಶೇಷ ಆಂಬುಲೆನ್ಸ್ ವ್ಯವಸ್ಥೆ
ಡಾ.ವಿನಯ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ವಿಶೇಷ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಇವತ್ತು ಬೆಳಗ್ಗೆ ಡಾ.ವಿನಯ್ ಅವರನ್ನು ನಂಜಪ್ಪ ಆಸ್ಪತ್ರೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಕ್ರಿಯೆ ನಡೆಯಿತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು.
ಜೀರೋ ಟ್ರಾಫಿಕ್ ವ್ಯವಸ್ಥೆ
ಡಾ.ವಿನಯ್ ಅವರನ್ನು ತುರ್ತಾಗಿ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಬೇಕಿದೆ. ಈ ಹಿನ್ನೆಲೆ ಸರ್ಕಾರದ ವತಿಯಿಂದ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ. ಆಂಬುಲೆನ್ಸ್ ಮುಂದೆ ಪೊಲೀಸ್ ವಾಹನವನ್ನು ನಿಯೋಜನೆ ಮಾಡಲಾಗಿದೆ. ಆಂಬುಲೆನ್ಸ್ ತೆರಳುವ ಸಂದರ್ಭ ನಂಜಪ್ಪ ಆಸ್ಪತ್ರೆ ಬಳಿ ಕೆಲವು ಕ್ಷಣ ವಾಹನಗಳನ್ನು ನಿಲ್ಲಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ
ಕಾರ್ಯಾಚರಣೆ ವೇಳೆ ಆನೆ ದಾಳಿ
ಚನ್ನಗಿರಿ ತಾಲೂಕು ಸೂಳೆಕೆರೆ ಬಳಿ ಕಾಡಾನೆಯೊಂದು ಬಾಲಕಿಯನ್ನು ತುಳಿದು ಸಾಯಿಸಿತ್ತು. ಆನೆಯನ್ನು ಅರೆ ಪ್ರಜ್ಞಾವಸ್ಥೆಗೆ ತಳ್ಳುವ ಮತ್ತು ಬರುವ ಇಂಜೆಕ್ಷನ್ ಡಾರ್ಟ್ ಮಾಡುವ ಪ್ರಕ್ರಿಯೆ ವೇಳೆ ಕಾಡಾನೆ ಡಾ. ವಿನಯ್ ಅವರ ಮೇಲೆ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಡಾ.ವಿನಯ್ ಅವರನ್ನು ಶಿವಮೊಗ್ಗದ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.