ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 AUGUST 2023
SHIMOGA : ಒಂದು ದಿನದ ಶಿಶುವನ್ನು (New Born) ಜೀರೋ ಟ್ರಾಫಿಕ್‌ನಲ್ಲಿ (Zero Traffic) ದಾವಣಗೆರೆ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಮಗುವಿಗೆ ವೈದ್ಯರು ವಿಶೇಷ ಆರೈಕೆ ಮಾಡುತ್ತಿದ್ದಾರೆ.
ದಾವಣಗೆರೆಯ ಹಾಲೇಶ್ ಎಂಬುವವರ ಮಗು ಜನಿಸುವಾಗಲೆ ಅನಾರೋಗ್ಯಕ್ಕೀಡಾಗಿತ್ತು. ಈ ಹಿನ್ನೆಲೆ ತುರ್ತಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಬೇಕಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೋನಿಗೆ ಬಿತ್ತು ಚಿರತೆ, ಸೆರೆ ಹಿಡಿಯಲು ಮೈಸೂರಿನಿಂದ ಬಂದಿತ್ತು ಟಾಸ್ಕ್ ಫೋರ್ಸ್
ಜೀರೋ ಟ್ರಾಫಿಕ್ ವ್ಯವಸ್ಥೆ
ಮಗುವಿನ ಅನಾರೋಗ್ಯ ವಿಚಾರ ತಿಳಿಯುತ್ತಿದ್ದಂತೆ ಎರಡು ಜಿಲ್ಲೆಯ ಪೊಲೀಸರು ಜೀರೋ ಟ್ರಾಫಿಕ್ (Zero Traffic) ವ್ಯವಸ್ಥೆ ಮಾಡಿದರು. ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಮಗುವನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯ ಏಜೆಂಲ್ಸ್ ಮಕ್ಕಳ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸರು ಮಗು ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು.

LATEST NEWS
- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು












