ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020
ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ನವಜಾತ ಶಿಶುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಕ್ಕಾಗಿ ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ಪುನಃ ಸಾರ್ವಜನಿಕ ಮೆಚ್ಚುಗೆ ಗಳಿಸಿದ್ದಾರೆ.
ಮಗುವಿನ ಆರೋಗ್ಯ ಸ್ಥಿತಿ ಹೇಗಿದೆ?
ಭದ್ರಾವತಿ ಅಶ್ವತ್ಥನಗರದ ದೇವೇಂದ್ರಪ್ಪ, ಸುಪ್ರಿಯಾ ದಂಪತಿಯ ನಾಲ್ಕು ದಿನದ ನವಜಾತ ಶಿಶುವಿಗೆ ಬಿಳಿ ರಕ್ತ ಕಣಗಳು ಹೆಚ್ಚಿವೆ. ಬ್ಲಡ್ ಇನ್ಫೆಕ್ಷನ್ ಇರುವ ಕುರಿತು ವೈದ್ಯರು ತಿಳಿಸಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿದ್ದು, ಮಣಿಪಾಲಕ್ಕೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದರು.
ಜೀರೋ ಟ್ರಾಫಿಕ್ಗೆ ವ್ಯವಸ್ಥೆ
ತುರ್ತಾಗಿ ಮಣಿಪಾಲಕ್ಕೆ ಕರೆದೊಯ್ಯಬೇಕಿದ್ದರಿಂದ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತೆ ಪೋಷಕರು ಜಿಲ್ಲಾ ರಕ್ಷಣಾಧಿಕಾರಿ ಅವರಲ್ಲಿ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಗು ಇದ್ದ ಆಂಬುಲೆನ್ಸ್ಗೆ ಇವತ್ತು ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದರು. ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆಯನ್ನೂ ಮಾಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]