ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020
ಸಿಬ್ಬಂದಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಜಿಲ್ಲಾ ಪಂಚಾಯಿತಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಆರೋಗ್ಯ ಪರೀಕ್ಷೆಗೆ ಒಳಗಾಗಿದ್ದ ಮಹಿಳಾ ಅಧಿಕಾರಿಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾ ಪಂಚಾಯಿತಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಇಡೀ ಆವರಣದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿಗಳು ಜಿಲ್ಲಾ ಪಂಚಾಯಿತಿಯ ಪ್ರತಿ ಕೊಠಡಿಯಲ್ಲೂ ಸ್ಯಾನಿಟೈಸ್ ಮಾಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿಗಳು ಜಿಲ್ಲಾ ಪಂಚಾಯಿತಿಯ ಆವರಣದಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದರು.
ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಇವತ್ತು ಮನೆಯಿಂದಲೇ ಕಾರ್ಯನಿರ್ವಹಿಸಿದರು. ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ವಿಧಾನ ಪರಿಷತ್ ಸದಸ್ಯರ ಕಚೇರಿಯನ್ನೂ ಬಂದ್ ಮಾಡಲಾಗಿದೆ. ನಾಳೆಯಿಂದ ಎಂದಿನಿಂತೆ ಕಚೇರಿಗಳು ಆರಂಭವಾಗಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]