SHIMOGA | ಲಾಕ್ ಡೌನ್‌ನಲ್ಲಿ ಕೌಟುಂಬಿಕ ಕಲಹ ಪ್ರಕರಣ ಹೆಚ್ಚಳ, ಸಭೆಯಲ್ಲಿ ಅಧಿಕಾರಿಗಳ ಕಳವಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021

ಲಾಕ್‍ ಡೌನ್ ಸಂದರ್ಭ ಕೌಟುಂಬಿಕ ಕಲಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಇದು ಆತಂಕಕಾರಿ ಬೆಳವಣಿಗೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಲ್.ವೈಶಾಲಿ ಕಳವಳ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಇಒ ವೈಶಾಲಿ, ಆರ್ಥಿಕ ಸಂಕಷ್ಟ, ಮದ್ಯ ವ್ಯಸನದಂತಹ ಸಮಸ್ಯೆಗಳಿಂದಾಗಿ ಕೌಟುಂಬಿಕ ಕಲಹಗಳಾಗಿವೆ. ಈ ಕಾರಣಕ್ಕೆ ಸಾಂತ್ವನ ಕೇಂದ್ರಗಳಲ್ಲಿ ದೂರುಗಳು ದಾಖಲಾಗಿವೆ ಎಂದರು.

300ಕ್ಕೂ ಹೆಚ್ಚು ಪೋಕ್ಸೊ ಕೇಸ್

ಪೋಕ್ಸೋ ಕಾಯ್ದೆ ಅಡಿ ಶಿವಮೊಗ್ಗ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳ ವಿಚಾರಣೆ ನಡೆಯುತ್ತಿದೆ. ಇದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಪೋಕ್ಸೋ ಪ್ರಕರಣಗಳಲ್ಲಿ ಸಿಲುಕಿದ ಸಂತ್ರಸ್ತೆಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸಗಳಾಗಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎಸ್.ಸರಸ್ವತಿ ತಿಳಿಸಿದರು.

ಮಂದಗತಿಯಲ್ಲಿ ನಡೆಯುತ್ತಿದೆ ತನಿಖೆ

ಪೋಕ್ಸೋ ಸಂತ್ರಸ್ತೆಗೆ ಕಾನೂನು ನೆರವು ನೀಡಬೇಕು. ಆದರೆ ಪೊಲೀಸ್ ಠಾಣೆಗಳಲ್ಲಿ ಪೋಕ್ಸೋ ಕಾಯ್ದೆ ಪ್ರಕರಣಗಳ ತನಿಖೆ ನಿಧಾನಗತಿಯಲ್ಲಿ ನಡೆಯುತ್ತಿದೆ. ತನಿಖೆಯನ್ನು ತ್ವರಿತಗೊಳಿಸುವತ್ತ ಪೊಲೀಸ್ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸರಸ್ವತಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಪೂಜಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಸಿ.ಸುರೇಶ್, ಸಂರಕ್ಷಣಾಧಿಕಾರಿ ಗಂಗೀಬಾಯಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment