ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ಲಾಕ್ ಡೌನ್ ಸಂದರ್ಭ ಕೌಟುಂಬಿಕ ಕಲಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಇದು ಆತಂಕಕಾರಿ ಬೆಳವಣಿಗೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಲ್.ವೈಶಾಲಿ ಕಳವಳ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಇಒ ವೈಶಾಲಿ, ಆರ್ಥಿಕ ಸಂಕಷ್ಟ, ಮದ್ಯ ವ್ಯಸನದಂತಹ ಸಮಸ್ಯೆಗಳಿಂದಾಗಿ ಕೌಟುಂಬಿಕ ಕಲಹಗಳಾಗಿವೆ. ಈ ಕಾರಣಕ್ಕೆ ಸಾಂತ್ವನ ಕೇಂದ್ರಗಳಲ್ಲಿ ದೂರುಗಳು ದಾಖಲಾಗಿವೆ ಎಂದರು.
300ಕ್ಕೂ ಹೆಚ್ಚು ಪೋಕ್ಸೊ ಕೇಸ್
ಪೋಕ್ಸೋ ಕಾಯ್ದೆ ಅಡಿ ಶಿವಮೊಗ್ಗ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳ ವಿಚಾರಣೆ ನಡೆಯುತ್ತಿದೆ. ಇದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಪೋಕ್ಸೋ ಪ್ರಕರಣಗಳಲ್ಲಿ ಸಿಲುಕಿದ ಸಂತ್ರಸ್ತೆಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸಗಳಾಗಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎಸ್.ಸರಸ್ವತಿ ತಿಳಿಸಿದರು.
ಮಂದಗತಿಯಲ್ಲಿ ನಡೆಯುತ್ತಿದೆ ತನಿಖೆ
ಪೋಕ್ಸೋ ಸಂತ್ರಸ್ತೆಗೆ ಕಾನೂನು ನೆರವು ನೀಡಬೇಕು. ಆದರೆ ಪೊಲೀಸ್ ಠಾಣೆಗಳಲ್ಲಿ ಪೋಕ್ಸೋ ಕಾಯ್ದೆ ಪ್ರಕರಣಗಳ ತನಿಖೆ ನಿಧಾನಗತಿಯಲ್ಲಿ ನಡೆಯುತ್ತಿದೆ. ತನಿಖೆಯನ್ನು ತ್ವರಿತಗೊಳಿಸುವತ್ತ ಪೊಲೀಸ್ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸರಸ್ವತಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಪೂಜಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಸಿ.ಸುರೇಶ್, ಸಂರಕ್ಷಣಾಧಿಕಾರಿ ಗಂಗೀಬಾಯಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200