ಶಿವಮೊಗ್ಗ LIVE
ಶಿವಮೊಗ್ಗ: ಯುವ ಕಾಂಗ್ರೆಸ್ ಕಾರ್ಯಕರ್ತರು ಇವತ್ತು ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ (Railway Station) ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಮುತ್ತಿಗೆ ಹಾಕಲು ಯತ್ನಿಸಿದ್ದೇಕೆ? ಇಲ್ಲಿದೆ ಪಾಯಿಂಟ್ಸ್

ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರವನ್ನು ಪದೇ ಪದೆ ಹೆಚ್ಚಳ ಮಾಡುತ್ತಿದೆ. ಈಗ ಮತ್ತೊಮ್ಮೆ ಪ್ರಯಾಣ ದರ ಏರಿಕೆ ಮಾಡಿ ಸಾಮಾನ್ಯ ಜನರಿಗೆ ಹೊರೆಯಾಗುವಂತೆ ಮಾಡಲಾಗುತ್ತಿದೆ. ಒಂದೇ ವರ್ಷದಲ್ಲಿ ಎರಡನೇ ಬಾರಿ ದರ ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿದರು.
ಕೋಟ್ಯಂತರ ಜನರು ರೈಲುಗಳಲ್ಲಿ ನಿತ್ಯ ಓಡಾಡುತ್ತಾರೆ. ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೆ ಹೊರೆಯಾಗಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಮಧ್ಯೆ ರೈಲ್ವೆ ಪ್ರಯಾಣ ದರ ಹೆಚ್ಚಳದಿಂದ ಜನರಿಗೆ ಮತ್ತಷ್ಟು ಹೊರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ » ವಿದ್ಯಾನಗರ ಮೇಲ್ಸೇತುವೆ ಮುಂದೆ ಬೈಕ್ ಸವಾರನ ಮೇಲೆ ಹತ್ತಿದ ಲಾರಿ
ರೈಲು ಪ್ರಯಾಣ ದರ ಹೆಚ್ಚಳ ಮಾಡಿರುವ ನಿರ್ಧಾರ ಹಿಂಪಡೆಯಬೇಕು. ರೈಲು ಪ್ರಯಾಣ ಸಾಮಾನ್ಯರ ಜೀವನಾಡಿ ಆಗಿರುವಂತೆ ನೋಡಿಕೊಳ್ಳಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕಟ್ಟುನಿಟ್ಟು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಿಲ್ದಾಣದ ಮುತ್ತಿಗೆ ಯತ್ನ
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನ ತಡೆದು, ವಶಕ್ಕೆ ಪಡೆದರು. ಮುತ್ತಿಗೆ ಹಿನ್ನೆಲೆ ರೈಲ್ವೆ ನಿಲ್ದಾಣದ ಬಳಿ ಭದ್ರತೆ ಹೆಚ್ಚಳ ಮಾಡಲಾಗಿತ್ತು. ನಿಲ್ದಾಣದ ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೆ ನಿಲ್ದಾಣದ ಮುಂಭಾಗ ಪ್ರತಿಭಟನಾ ಸಭೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರ ಅಧ್ಯಕ್ಷ ಚರಣ್ ಜೆ.ಶೆಟ್ಟಿ, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಪ್ರಮುಖರಾದ ರಮೇಶ್ ಹೆಗ್ಡೆ, ಧೀರರಾಜ್ ಹೊನ್ನವಿಲೆ, ಯಮುನಾ ರಂಗೇಗೌಡ, ಗಿರೀಶ್, ಮಧುಸೂದನ್, ರಾಮು ಸೇರಿದಂತೆ ಹಲವರು ಇದ್ದರು.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





