ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀ ಸೀತಾ ಕಲ್ಯಾಣ (Sita Kalyana) ಶತಮಾನೋತ್ಸವ ಸಮಿತಿ ಆಶ್ರಯದಲ್ಲಿ ಡಿಸೆಂಬರ್ 7ರಿಂದ ಜನವರಿ 5ರವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾನಾಮಾರ್ಚನ ಮಹೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಭಾರ್ಗವರಾಮ ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರ್ಚಕ ಭಾರ್ಗವರಾಮ, ಡಿಸೆಂಬರ್ 7ರಂದು ಬೆಳಗ್ಗೆ ಮಹಾಸಂಕಲ್ಪ, ನವಗ್ರಹ ಪೂಜೆ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. 30 ದಿನ ನಿರಂತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಯಾವ್ಯಾವ ದಿನ ಏನೇನು ಕಾರ್ಯಕ್ರಮ?
ಡಿ.8 ರಿಂದ ಡಿ.17ರವರೆಗೆ ಶ್ರೀ ಭಾಗವತ ಮಹಾ ಪುರಾಣ ಹೋಮ ನಡೆಯಲಿದೆ. ಬೆಂಗಳೂರಿನ ಹೆಚ್.ಆರ್. ಶ್ರೀಧರ್ ರವರಿಂದ ಪ್ರತಿದಿನ ಸಂಜೆ 6.30ಕ್ಕೆ ಭಾಗವತ ಸಪ್ತಾಹ ಉಪನ್ಯಾಸ ನಡೆಯಲಿದೆ. ಡಿ.15 ರಿಂದ 17ರವರೆಗೆ ಕಲ್ಲಾಪುರದ ಪವಮಾನ ಆಚಾರ್ ಅವರಿಂದ ವಿಷ್ಣುವಿನ ದಶಾವತಾರ ಪ್ರವಚನ, ದಶಾವತಾರ ಉತ್ಸವ ನಡೆಯಲಿದೆ.
ಡಿ.18ರಿಂದ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ನಾನಾ ಭಾಗದ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ » ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?

ಶಕ್ತಿ ದೇವತೆಗಳ ಸಮಾಗಮ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೀನದಯಾಳು, ವಿಶ್ವ ಹಿಂದೂ ಪರಿಷದ್ ಮತ್ತು ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ 27ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.19ರಂದು ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





