ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಆರು ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಈ ನಡುವೆ, ಇವತ್ತು ಮೂವರು ಸೋಂಕಿತರು ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ಯಾರಿಗೆಲ್ಲ ಸೋಂಕು ತಗುಲಿದೆ?
ಪಿ10826 – 35 ಪುರುಷ – ಐಎಲ್‍ಐ
ಪಿ10827 – 45 ಪುರುಷ – ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ
ಪಿ10828 – 38 ಪುರುಷ – ಐಎಲ್‍ಐ
ಪಿ10829 – 40 ಪುರುಷ – ಪಿ9546 ಸಂಪರ್ಕದಿಂದ ಸೋಂಕು
ಪಿ10830 – 30 ಮಹಿಳೆ – ಐಎಲ್ಐ
ಪಿ10831 – 20 ಮಹಿಳೆ – ಪಿ9546 ಸಂಪರ್ಕದಿಂದ ಸೋಂಕು
ಮೃತ ಮಹಿಳೆಯಿಂದ ಇಬ್ಬರಿಗೆ ಸೋಂಕು
ಪಿ9546 ಪ್ರಥಮಿಕ ಸಂಪರ್ಕದಿಂದ ಇಬ್ಬರಿಗೆ ಕರೋನ ಸೋಂಕು ತುಗುಲಿದೆ. ಜೂನ್ 22ರಂದು ಶಿಕಾರಿಪುರದ 75 ವರ್ಷದ ವೃದ್ಧೆ ಪಿ9546 ಮೃತರಾಗಿದ್ದರು. ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಜೂ.20ರಂದು ವೃದ್ಧೆ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಿ10829 ಮತ್ತು ಪಿ10831ಗೆ ಸೋಂಕು ತಗುಲಿದೆ.
ವೈದ್ಯರಿಗೆ ಸೋಂಕು, ಖಾಸಗಿ ಆಸ್ಪತ್ರೆಗೆ
ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಕರೋನಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭವಾಗಿದೆ. ಇವತ್ತು ಸೋಂಕು ತಗುಲಿರುವ ಇಬ್ಬರು ವೈದ್ಯರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನಡೆಯುತ್ತಿದೆ.
ಸೋಂಕು ತಗುಲಿದ್ದು ಹೇಗೆ ಅನ್ನೋದೆ ಗೊತ್ತಿಲ್ಲ
ಬಸ್ ಏಜೆಂಟ್ ಒಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಆದರೆ ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನೋದು ಇನ್ನೂ ಖಚಿತವಾಗಿಲ್ಲ. ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗಾಗಲೆ ಇವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.
ಇವತ್ತು ಮೂವರು ಗುಣಮುಖ
ಶಿವಮೊಗ್ಗದಲ್ಲಿ ಇವತ್ತು ಮೂವರು ಕರೋನ ಸೋಂಕಿನಿಂದ ಗುಣವಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಗುಣವಾದವರ ಸಂಖ್ಯೆ 96ಕ್ಕೆ ಹೆಚ್ಚಳವಾಗಿದೆ. 31 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. ಈತನಕ ಜಿಲ್ಲೆಯಲ್ಲಿ ಇಬ್ಬರು ಕರೋನ ಸೋಂಕಿಗೆ ಮೃತರಾಗಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]