ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್‌ ಬಸ್ಸು, ಅದೃಷ್ಟವಶಾತ್‌ ಪ್ರಯಾಣಿಕರು ಪಾರು, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಿಪ್ಪನ್‌ಪೇಟೆ: ಚಲಿಸುತ್ತಿದ್ದ ಖಾಸಗಿ ಸ್ಲೀಪರ್‌ ಬಸ್ಸಿನಲ್ಲಿ (Sleeper Bus) ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

ಅರಸಾಳು – ಸೂಡೂರು ಸಮೀಪದ 9ನೇ ಮೈಲಿಗಲ್ಲು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಹೊಸನಗರದಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ತೆರಳುತಿತ್ತು.

ದಿಢೀರ್‌ ಕಾಣಿಸಿಕೊಂಡ ಬೆಂಕಿ

ಶ್ರೀ ಅನ್ನಪೂರ್ಣೇಶ್ವರಿ ಸಂಸ್ಥೆಯ ಬಸ್ಸಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಬಸ್ಸನನ್ನು ಕೂಡಲೆ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾರೆ. ಎಮರ್ಜನ್ಸಿ ಡೋರ್‌ ಮೂಲಕ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದ್ದಾರೆ ಎಂದು ತಿಳಿದು ಬಂದಿದೆ.

Private-Bus-catches-fire-between-suduru-and-arasalu

ಎಲ್ಲರು ಪ್ರಾಣಪಾಯದಿಂದ ಪಾರು

ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಹಲವರಿಗೆ ಸುಟ್ಟ ಗಾಯವಾಗಿದೆ. ಎಲ್ಲರಿಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 8 ಪ್ರಯಾಣಿಕರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಕಿ ನಂದಿಸಲು ಹರಸಾಹಸ

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು, ರಸ್ತೆಯಲ್ಲಿ ಸಾಗುತ್ತಿದ್ದವರು ಪ್ರಯಾಣಿಕರ ನೆರವಿಗೆ ಧಾವಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಘಟನೆಯಲ್ಲಿ ಬಸ್ಸು ಸಂಪೂರ್ಣ ಸುಟ್ಟು ಹೋಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment