ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 9 DECEMBER 2024
ಬೆಂಗಳೂರು : ಇಲ್ಲಿನ ಅರಮನೆ ಮೈದಾನದಲ್ಲಿ ಸೊರಬ ವಿಧಾನಸಭೆ ಕ್ಷೇತ್ರದ ಬೆಂಗಳೂರು ನಿವಾಸಿಗಳ (Residents) ಸಮ್ಮಿಲನ 2024 ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದರು.
ಮಿನಿಸ್ಟರ್ ಹೇಳಿದ್ದೇನು?
ಸೊರಬ ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ 250 ಕೋಟಿ ರೂ. ಬಿಡುಗಡೆ ಮಾಡಿದೆ. ಸದ್ಯದಲ್ಲೇ ಈ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ಸಾಮಾಜಿಕ ಜಾಲತಾಣಗಳ ಟ್ರೋಲ್ಗಳಿಗೆ ಯಾರೂ ತಲೆ ಕೆಡಿಸಿಕೊಳ್ಳುವುದು ಬೇಡ.
– ಮಧು ಬಂಗಾರಪ್ಪ, ಸಚಿವ
ಬೆಂಗಳೂರಿನಲ್ಲಿರುವ ಸೊರಬ ನಿವಾಸಿಗಳ ಪೋಷಕರ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ಹಲವರನ್ನು ಸನ್ಮಾನಿಸಲಾಯಿತು.
ಅನಿತಾ ಮಧು ಬಂಗಾರಪ್ಪ, ಕೆ.ಎನ್.ತಿಲಕ್ಕುಮಾರ್, ಸುಜಾತಾ ತಿಲಕ್ ಕುಮಾರ್, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ ಏಕಾಂತಪ್ಪ, ವಕೀಲರಾದ ಕೇಶವಮೂರ್ತಿ ಹಾಲಗಳಲೆ, ಕುಮಾರಸ್ವಾಮಿ ಹೊಸೂರು, ದಯಾನಂದ ಬಿದರಗೆರೆ, ಮುಕುಂದ ಹಿರೇಇಡಗೋಡು, ಅನಿಲ್, ಗಣಪತಿ ಹಳೇಸೊರಬ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದ ಜನರೆ ಹುಷಾರ್, ಇಲ್ಲಿದೆ ಟಾಪ್ 5 ವಂಚನೆ ಲಿಸ್ಟ್, ಇವರ ಬಲೆಗೆ ಬಿದ್ದರೆ ಸಂಕಷ್ಟ ಫಿಕ್ಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422