ಶಿವಮೊಗ್ಗ: ಬೊಮ್ಮನಕಟ್ಟೆ ಇ-ಬ್ಲಾಕ್‌ನಲ್ಲಿ ತಡರಾತ್ರಿ ಪಾರ್ಟಿ ವೇಳೆ ಪವನ್ ಎಂಬಾತನ ಹತ್ಯೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ರಕ್ಷಣಾಧಿಕಾರಿ (SP) ಜಿ.ಕೆ.ಮಿಥುನ್ ಕುಮಾರ್, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 35 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪವನ್ (28) ಮತ್ತು ಶಿವಕುಮಾರ್ (49) ಕಳೆದ ರಾತ್ರಿ ಪಾರ್ಟಿ ಮುಗಿಸಿ, ಊಟ ಮಾಡಿದ್ದಾರೆ. ರಾತ್ರಿ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಮನಸ್ತಾಪ ಉಂಟಾಗಿದೆ. ಈ ವೇಳೆ ಶಿವಕುಮಾರ್, ಪವನ್‌ನನ್ನು ಕೊಂದಿದ್ದಾನೆ ಎಂದು ತಿಳಿಸಿದರು.

ಆರೋಪಿ ಶಿವಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿ ಎರಡೂವರೆ ಹೊತ್ತಿಗೆ ಹತ್ಯೆ ಮಾಡಿದ್ದಾಗಿ ವಿಚಾರಣೆ ವೇಳೆ ಶಿವಕುಮಾರ್ ಬಾಯಿ ಬಿಟ್ಟಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು
