ಶಿವಮೊಗ್ಗ ಲೈವ್.ಕಾಂ | SHIMOGA | 7 ಜನವರಿ 2020
ಮಲೆನಾಡಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ ಶುರುವಾಗಿದೆ. ಈ ನಡುವೆ ಆರೋಗ್ಯ ಇಲಾಖೆ ವತಿಯಿಂದ ಲಸಿಕಾ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಮಂಗನ ಕಾಯಿಲೆ ಕುರಿತು ಮತ್ತಷ್ಟು ವ್ಯಾಪಕವಾಗಿ ಜಾಗೃತಿ ಮೂಡಿಸಲು ಸೆಲಬ್ರಿಟಿಗಳ ಮೊರೆ ಹೋಗಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ದೇಶಾದ್ಯಂತ ಪಲ್ಸ್ ಪೋಲಿಯೊ ಲಿಸಿಕಾ ಕಾರ್ಯಕ್ರಮದ ಜಾಗೃತಿಗೆ ಸಿನಿಮಾ ಸ್ಟಾರ್’ಗಳು, ಕ್ರಿಕೆಟಿಗರು ಸೇರಿದಂತೆ ಸೆಲಬ್ರಿಟಿಗಳನ್ನು ಬಳಕೆ ಮಾಡಿಕೊಳ್ಳಲು ಯೋಜಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ಮಂಗನ ಕಾಯಿಲೆಗೂ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಕ್ಯಾಸನೂರು ಫಾರೆಸ್ಟ್ ಡಿಸೀಸ್ (KFD) ಲಸಿಕಾ ಕಾರ್ಯಕ್ರಮ ಆರಂಭವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ. ಆದರೂ ಶೇ.30ರಷ್ಟು ಜನರ ಈವರೆಗು ಲಿಸಿಕೆ ಹಾಕಿಸಿಕೊಂಡಿಲ್ಲ ಎಂಬ ಅಂದಾಜಿದೆ. ಹಾಗಾಗಿ ಜಾಗೃತಿ ಅಭಿಯಾನದ ಅವಶ್ಯಕತೆ ಇದೆ ಎಂಬುದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಆಗಿದೆ.
‘KFD ಕುರಿತು ಜಾಗೃತಿಗಾಗಿ ವಿಡಿಯೋ ಒಂದನ್ನು ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ಕೆಲವು ನಟ, ನಟಿಯರನ್ನು ಸಂಪರ್ಕಿಸಲಾಗುತ್ತಿದೆ. ಅವರ ಮೂಲಕ ಕಾಯಿಲೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಪರಿಮಾಣು ಕ್ರಿಮಿ ಪರಿಶೋಧನ ಪ್ರಯೋಗ ಶಾಲೆ ಉಪ ನಿರ್ದೇಶಕ ಎಸ್.ಕೆ. ಕಿರಣ್ ಅವರು ತಿಳಿಸಿದ್ದಾರೆ.
KFD ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಪೋಸ್ಟರ್’ಗಳು, ಕರಪತ್ರಗಳನ್ನು ಹಂಚಲಾಗುತ್ತಿದೆ. ಈ ಜಾಗೃತಿ ಅಭಿಯಾನವನ್ನು ಮತ್ತಷ್ಟು ವ್ಯಾಪಕಗೊಳಿಸಲು ಸ್ಟಾರ್ ನಟ, ನಟಿಯರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]