Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?

ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?

04/12/2022 1:26 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 3 DECEMBER 2022

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಶಿವಮೊಗ್ಗ : ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಎಲ್ಲವು ಅಂದುಕೊಂಡ ಹಾಗೆ ಆದರೆ, 2023ರ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. (INSIDE SHIMOGA AIRPORT)

Shimoga Nanjappa Hospital

ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ವಿಮಾನ ನಿಲ್ದಾಣದಲ್ಲಿ ಏನೇನೆಲ್ಲ ಸಿದ್ಧವಾಗಿದೆ. ಅದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.

(INSIDE SHIMOGA AIRPORT)

ಟರ್ಮಿನಲ್ ಗೆ ಫೈನಲ್ ಟಚ್

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಸಿದ್ಧವಾಗಿದೆ. ಇದು ಅತ್ಯಾಧುನಿಕ ಮತ್ತು ಅಪ್ ಗ್ರೇಡ್ ಆಗಿರುವ ತಂತ್ರಜ್ಞಾನ ಹೊಂದಿರಲಿದೆ. ತಾಂತ್ರಿಕವಾಗಿ ಈ ಟರ್ಮಿನಲ್ 20 ರಿಂದ 25 ವರ್ಷ ಮುಂದಿರಲಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ. ಟರ್ಮಿನಲ್ ಹೊರಭಾಗದ ಕೆಲಸಗಳು ಮುಗಿದಿವೆ. ಒಳಾಂಗಣದ ಕಾರ್ಯಗಳು ನಡೆಯುತ್ತಿವೆ.

ALSO READ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶದ ವಿಚಾರ, ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

Shimoga Airport Sogane

ಚೆಕ್ ಇನ್, ಸೆಕ್ಯೂರಿಟಿ ಕ್ಲಿಯರೆನ್ಸ್, ಪಾಸ್ ಪೋರ್ಟ್ ಪರಿಶೀಲನೆ, ವೇಯ್ಟಿಂಗ್ ಏರಿಯಾ, ಕಸ್ಟಮ್ಸ್ ಸೇರಿದಂತೆ ವಿವಿಧ ಕಚೇರಿಗಳು ಈ ಟರ್ಮಿನಲ್ ನಲ್ಲಿ ಕಾರ್ಯ ನಿರ್ವಹಿಸಲಿದೆ.

(INSIDE SHIMOGA AIRPORT)

ರಾಂಪ್, ಏರ್ ಕ್ರಾಫ್ಟ್ ಸ್ಟಾಂಡ್

ಟರ್ಮಿನಲ್ ಪಕ್ಕದಲ್ಲಿ ವಿಮಾನಗಳ ನಿಲುಗಡೆಗೆ ರಾಂಪ್ ಸಿದ್ಧವಾಗಿದೆ. ಇದರ ಕಾಮಗಾರಿ ಕೂಡ ಅಂತಿಮ ಹಂತದಲ್ಲಿದೆ. ಕಾಂಕ್ರೆಟ್ ಮೂಲಕ ರಾಂಪ್ ನಿರ್ಮಿಸಲಾಗಿದೆ. ಇಲ್ಲಿಯೇ ವಿಮಾನಗಳ ಸ್ಟಾಂಡ್ ಕೂಡ ಇರಲಿದೆ. ವಿಮಾನಗಳು ಲ್ಯಾಂಡ್ ಆದ ಬಳಿಕ ರನ್ ವೇಯಿಂದ ರಾಂಪ್ ಕಡೆಗೆ ಬರಲಿದೆ. ಪ್ರಯಾಣಿಕರು ವಿಮಾನ ಇಳಿದು ಟರ್ಮಿನಲ್ ಗೆ ಬರಬೇಕಾಗುತ್ತದೆ.

ALSO READ – ಶಿವಮೊಗ್ಗಕ್ಕೆ ಜಪಾನ್ ಕಾನ್ಸುಲ್ ಡೆಪ್ಯೂಟಿ ಜನರಲ್, ಹೂಡಿಕೆ ಕುರಿತು ಚರ್ಚೆ, ವಿಮಾನ ನಿಲ್ದಾಣಕ್ಕೆ ಭೇಟಿ

Shimoga Airport Terminal

(INSIDE SHIMOGA AIRPORT)

ರನ್ ವೇ, ಟ್ಯಾಕ್ಸಿ ವೇ

LIC-HOME-PRASHANTHರಾಜ್ಯದಲ್ಲಿ ಅತಿ ದೊಡ್ಡ ರನ್ ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಇದಾಗಿದೆ. 3,200 ಮೀಟರ್ ಉದ್ದದ ರನ್ ವೇ ಕಾಮಗಾರಿ ಪೂರ್ಣಗೊಂಡಿದೆ. ಫ್ಲೈಟ್ ಸ್ಟಾಂಡ್ ನಿಂದ ರನ್ ವೇಗೆ ತೆರಳುವ ಟ್ಯಾಕ್ಸಿ ವೇ ಕೂಡ ಪೂರ್ಣಗೊಂಡಿದೆ. ಇವುಗಳ ಅಂತಿಮ ಹಂತದ ಕಾರ್ಯಗಳು ನಡೆಯುತ್ತಿವೆ. ರಾತ್ರಿ ಹೊತ್ತಿನಲ್ಲಿಯು ವಿಮಾನಗಳ ಲ್ಯಾಂಡಿಂಗ್ ಗೆ ವ್ಯವಸ್ಥೆ ಇರಲಿದೆ.

ALSO READ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೆಹಲಿಯಿಂದ ಅಧಿಕಾರಿಗಳ ತಂಡ, ಉದ್ಘಾಟನೆಗೆ ಬರ್ತಾರೆ ಪ್ರಧಾನಿ

Shimoga Airport ATC

ಏರ್ ಟ್ರಾಫಿಕ್ ಕಂಟ್ರೋಲ್ ಸೆಂಟರ್

ವಿಮಾನ ಹಾರಾಟ ನಿಯಂತ್ರಣಕ್ಕೆ ಏರ್ ಟ್ರಾಫಿಕ್ ಕಂಟ್ರೋಲ್ (ATC) ಸೆಂಟರ್ ನಿರ್ಮಿಸಲಾಗಿದೆ. ಇಲ್ಲಿಂದಲೆ ನಿಯಂತ್ರಕರು ವಿಮಾನವನ್ನು ನಿಯಂತ್ರಿಸುತ್ತಾರೆ. ಈಗಾಗಲೆ ATC ಕಟ್ಟಡ ಸಿದ್ಧವಾಗಿದೆ. ಇದರ ಹೊರಾಂಗಣ ಮತ್ತು ಒಳಾಂಗಣ ಕೆಲಸಗಳು ನಡೆಯುತ್ತಿವೆ. ನುರಿತ ತಂತ್ರಜ್ಞರು ಇದರ ತಾಂತ್ರಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

Yedyurappa visit to Shimoga Airport

10 ವಾಚ್ ಟವರ್

ವಿಮಾನ ನಿಲ್ದಾಣದ ರಕ್ಷಣೆಗೆ ದೊಡ್ಡ ಕಾಂಪೌಂಡ್ ಮತ್ತು ಅದರ ಮೇಲೆ ತಂತಿ ಬೇಲಿ ಅಳವಡಿಸಲಾಗಿದೆ. ಅಲ್ಲದೆ ಕಾಂಪೌಂಡ್ ಸುತ್ತಲು 10 ವಾಚ್ ಟವರ್ ನಿರ್ಮಾಣ ಮಾಡಲಾಗಿದೆ. ರಾಜ್ಯ ಕೈಗಾರಿಕ ಭದ್ರತಾ ಪಡೆಗೆ (KSISF) ಭದ್ರತೆಯ ಉಸ್ತುವಾರಿ ವಹಿಸುವ ಸಾಧ್ಯತೆ ಇದೆ. ಭದ್ರತಾ ಸಿಬ್ಬಂದಿಗೆ ಬಿಸಿಲು, ಮಳೆಯಿಂದ ರಕ್ಷಣೆಗೆ ಕಾಂಕ್ರಿಟ್ ವಾಚ್ ಟವರ್ ಗಳಲ್ಲಿ ಸ್ಥಾಪಿಸಲಾಗಿದೆ. ಮೂಲ ಸೌಕರ್ಯವು ಇದರಲ್ಲಿ ಇರಲಿದೆ.

Shimoga Airport Parking

ಏರ್ ಪೋರ್ಟ್ ರಸ್ತೆ

https://chat.whatsapp.com/KChu2C1bGTM2v9HmZlfIkSಕಾಚಿನಕಟ್ಟೆ ಬಳಿ ವಿಮಾನ ನಿಲ್ದಾಣದ ಮುಖ್ಯ ಗೇಟ್ ಸ್ಥಾಪಿಸಲಾಗಿದೆ. ಅಲ್ಲಿಂದ ಟರ್ಮಿನಲ್ ವರೆಗೆ ಯಾವುದೆ ಅಡೆತಡೆ ಇಲ್ಲದೆ ಸಾಗಲು ಎರಡು ಬದಿ ರಸ್ತೆ ನಿರ್ಮಿಸಲಾಗಿದೆ. ನಿಲ್ದಾಣದಲ್ಲಿ ಸಿಬ್ಬಂದಿ ಓಡಾಟಕ್ಕೆ ಅನುಕೂಲವಾಗಲು ಕಾಂಪೌಂಡ್ ಸುತ್ತಲು ರಸ್ತೆ ನಿರ್ಮಿಸಲಾಗಿದೆ. ಇನ್ನು, ಶಿವಮೊಗ್ಗದಿಂದ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 13 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

Shimoga Airport ATC

ವಿಮಾನ ನಿಲ್ದಾಣಕ್ಕಾಗಿ ಎರಡು ವಿದ್ಯುತ್ ಸಬ್ ಸ್ಟೇಷನ್ ಸ್ಥಾಪಿಸಲಾಗುತ್ತಿದೆ. ಟರ್ಮಿನಲ್ ಬಿಲ್ಡಿಂಗ್ ಮುಂಭಾಗ ವಾಹನಗಳ ಪಾರ್ಕಿಂಗ್ ಗೆ ವಿಶಾಲ ವ್ಯವಸ್ಥೆ ಮಾಡಲಾಗಿದೆ.

Shimoga Nanjappa Hospital

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article breaking news graphics BREAKING NEWS – ಶಿವಮೊಗ್ಗಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಿಢೀರ್ ಭೇಟಿ, ಮಾಹಿತಿ ಸಂಗ್ರಹ
Next Article crime name image 5 ದಿನ ಬಿಟ್ಟು ಶಿವಮೊಗ್ಗದ ಮನೆಗೆ ಬಂದ ದಂಪತಿ ರೂಮೊಳಗೆ ಹೋಗುತ್ತಿದ್ದಂತೆ ಕಾದಿತ್ತು ಶಾಕ್

ಇದನ್ನೂ ಓದಿ

Tunga-Dam-Gajanuru.
SHIVAMOGGA

ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Heavy-outflow-from-tunga-dam.
SHIVAMOGGA

ತುಂಗಾ ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
House-wall-collapse-at-mandagatta
SHIVAMOGGA

ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Tree-falls-to-Shimoga-Thirthahalli-Road-at-gajanuru
SHIVAMOGGA

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
KUMSI-NEWS
SHIVAMOGGA

ಕುಂಸಿ ಮೆಸ್ಕಾಂ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ, ಯಾವಾಗ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?