ಶಿವಮೊಗ್ಗ ಪೊಲೀಸ್ ವಾಟ್ಸಪ್’ಗೆ ಭರ್ಜರಿ ರೆಸ್ಪಾನ್ಸ್, 2 ತಿಂಗಳಲ್ಲಿ ಲಕ್ಷ ಲಕ್ಷ ದಂಡ, ವಾಟ್ಸಪ್’ನಲ್ಲಿ ಏನೆಲ್ಲ ಕಂಪ್ಲೇಂಟ್ ಬಂದಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 24 ಜನವರಿ 2020

2019 readers copy new

ಹೆಲ್ಮೆಟ್ ಧರಿಸದೇ ಕದ್ದುಮುಚ್ಚಿ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ಪೊಲೀಸರ ಕಣ್ಣು ತಪ್ಪಿಸಿದರೂ ದಂಡದಿಂದ ಮಾತ್ರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ!

Shimoga City Nehru Road General Image 1 1

ಸಿಗ್ನಲ್‌ಗಳಲ್ಲಿ ಪೊಲೀಸರು ಕಂಡಾಗ ಮಾತ್ರ ಹೆಲ್ಮೆಟ್ ಧರಿಸುವ ವಾಹನ ಚಾಲಕರು ಇನ್ಮುಂದೆ ಹುಷಾರಾಗಿರಬೇಕು. ಇದಕ್ಕೆ ಕಾರಣ, ಪೊಲೀಸ್ ಇಲಾಖೆ ಸಾರ್ವಜನಿಕರ ಮೂಲಕವೇ ನಿಯಮ ಉಲ್ಲಂಘಿಸುವವರ ಮೇಲೆ ಕಣ್ಣಿಟ್ಟಿದೆ.

ವಾಟ್ಸಪ್’ನಲ್ಲಿ ಬರುತ್ತಿವೆ ಕಂಪ್ಲೇಂಟ್

ಇಲಾಖೆಯಲ್ಲಿರುವ ಸೀಮಿತ ಸಿಬ್ಬಂದಿಯನ್ನೇ ನಂಬಿಕೊಂಡು ಜಿಲ್ಲೆಯಲ್ಲಿರುವ ಎಲ್ಲ ವಾಹನಗಳ ಮೇಲೆ ಕಣ್ಣಿಡಲಾಗದು. ಅದಕ್ಕಾಗಿ ಸಾರ್ವಜನಿಕರ ಸಹಕಾರ ಪಡೆಯಲಾಗುತ್ತಿದೆ. ಕಳೆದ ನವೆಂಬರ್ 26ರಂದು ಇದಕ್ಕಾಗಿಯೇ ವಾಟ್ಸ್‌ಆಪ್ ಸಂಖ್ಯೆ ನೀಡಲಾಗಿದ್ದು, ಅದಕ್ಕೆ ಎರಡು ತಿಂಗಳಲ್ಲಿ 650 ದೂರುಗಳು ಬಂದಿವೆ. 3.25 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ತಿಂಗಳಿಗೆ ಸರಾಸರಿ 325 ದೂರುಗಳು ಸ್ವೀಕರಿಸಲಾಗಿದೆ. ಈ ಪೈಕಿ, ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು ಹಾಗೂ ನೋ ಪಾರ್ಕಿಂಗ್‌ನಲ್ಲಿ ನಿಲುಗಡೆ ಮಾಡುವುದು ಹಾಗೂ ಟ್ರಿಪಲ್ ರೈಡಿಂಗ್ ಪ್ರಕರಣಗಳೇ ಹೆಚ್ಚಿನ ಸಂಖ್ಯೆಯಲ್ಲಿವೆ.

ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಪೊಲೀಸರಷ್ಟೇ ಅಲ್ಲದೇ ಜನರೂ ಕಣ್ಣಿಡಬೇಕೆಂಬ ಉದ್ದೇಶದಿಂದ ವಾಟ್ಸ್‌ಆಪ್ ಸಂಖ್ಯೆ 9480803300 ನೀಡಲಾಗಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ. ಜನರು ಜವಾಬ್ದಾರಿಯುತವಾಗಿ ದೂರು ನೀಡಿದ್ದಾರೆ. ಅದಕ್ಕೆ ಸೂಕ್ತ ಕ್ರಮಕೈಗೊಳ್ಳಲಾಗಿದೆ.

– ಕೆ.ಎಂ. ಶಾಂತರಾಜು, ಎಸ್‌ಪಿ, ಶಿವಮೊಗ್ಗ

Shimoga SP Shantharaj 1 1

ವಾಟ್ಸಪ್’ನಲ್ಲಿ ಭರ್ಜರಿ ರೆಸ್ಪಾನ್ಸ್

ಹಿಂದಿನ ಎಸ್‌ಪಿ ಅಭಿನವ್ ಖರೆ ಅವರು ಟ್ರಾಫಿಕ್ ನಿಯಮ ಅನುಷ್ಠಾನದಲ್ಲಿ ಕಟ್ಟುನಿಟ್ಟಿಗೆ ಪಬ್ಲಿಕ್ ಐ, ಆಪ್‌ಗಳನ್ನು ಅಭಿವೃದ್ಧಿ ಪಡಿಸಿ ಜನರಿಗೆ ನೀಡಿದರು. ಆದರೆ, ಜನರಿಂದ ಪೂರಕ ಸ್ಪಂದನೆ ಸಿಕ್ಕಿರಲಿಲ್ಲ. ಈ ನಿಟ್ಟಿನಲ್ಲಿ ಸಾಕಷ್ಟು ಪ್ರಚಾರಗಳನ್ನು ಕೈಗೊಂಡರೂ ಜನರು ಬಳಕೆಗೆ ಮುಂದೆ ಬಂದಿರಲಿಲ್ಲ.

ಆದರೆ, ಎಸ್‌ಪಿ ಕೆ.ಎಂ. ಶಾಂತರಾಜು ಅವರು ವಾಟ್ಸ್‌ಆಪ್ ಮೂಲಕ ದೂರು ನೀಡಲು ವೇದಿಕೆ ಕಲ್ಪಿಸಿದ್ದು, ಎರಡೇ ತಿಂಗಳಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಸಾರ್ವಜನಿಕರ ಸಹಕಾರದೊಂದಿಗೆ ೬೫೦ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Shimoga Police use Whatsapp To control traffic violation. 9480803300 is the whatsapp of Shimoga Police

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 24, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment