ದೀಪಾವಳಿಗೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಯಾವಾಗ ಹೊರಡಲಿದೆ? ಎಲ್ಲೆಲ್ಲಿ ನಿಲುಗಡೆ ಇರಲಿದೆ?

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು (Special Train) ಸೇವೆಯನ್ನು ನೈಋತ್ಯ ರೈಲ್ವೆ ವಿಸ್ತರಣೆ ಮಾಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 50 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರದಿಂದ ಹೊರಟು ಮರುದಿನ (ಶನಿವಾರ) ಬೆಳಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06588 ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಅಕ್ಟೋಬರ್ 18 ಮತ್ತು 25 ರಂದು ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗದ ಮದ್ಯದಂಗಡಿಯಲ್ಲಿ 21 ಬಗೆಯ ದುಬಾರಿ ಬೆಲೆಯ ಬ್ರ್ಯಾಂಡೆಡ್‌ ಮದ್ಯ ಕಳವು, ಯಾವೆಲ್ಲ ಬ್ರ್ಯಾಂಡ್‌ ಕಳುವಾಗಿವೆ?

ಈ ರೈಲು ಎರಡೂ ಮಾರ್ಗದಲ್ಲಿ ತುಮಕೂರು, ಸಂಪಿಗೆ ರಸ್ತೆ, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ, ಆನಂದಪುರಂ ಮತ್ತು ಸಾಗರ ಜಂಬಗಾರು ರೈಲು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಈ ಸೌಲಭ್ಯವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದ ಬಿ.ವೈ ರಾಘವೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Special Train

Electric-Locomotive-train-for-Shimoga

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment