ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆ.11 ರಿಂದ 14ರವರೆಗೆ ಚುಂಚಾದ್ರಿ ಕಪ್ (Chunchadri Cup) ವಾಲಿಬಾಲ್ ಪಂದ್ಯಾವಳಿ (Volley Ball Tournament) ಆಯೋಜಿಸಲಾಗಿದೆ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಭಾಸ್ಕರ್ ಜಿ.ಕಾಮತ್ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ಜಿ.ಕಾಮತ್, 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 21ನೇ ವರ್ಷದ ಚುಂಚಾದ್ರಿ ಕಪ್ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆದಿಚುಂಚನಗಿರಿ ವಿದ್ಯಾ ಸಂಸ್ಥೆ ನಿರ್ದೇಶಕ ಡಿ.ವಿ.ಸತೀಶ್ ಮಾತನಾಡಿ, ಮಳೆ ಇಲ್ಲದ ಕಾರಣ ಹೊರಾಂಗಣದಲ್ಲಿಯು ಪಂದ್ಯಾವಳಿ ನಡೆಸಲಾಗುತ್ತದೆ. ಈಗಾಗಲೆ ಅಂಗಣದ ಸಿದ್ಧತೆ ನಡೆಯುತ್ತಿದೆ. ಪಂದ್ಯಾವಳಿಗೆ ಆಗಮಿಸುವ ಸ್ಪರ್ಧಿಗಳಿಗೆ ಊಟ, ವಸತಿಗೆ ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಪಂದ್ಯಾವಳಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಸಾನ್ನಿಧ್ಯದಲ್ಲಿ ನಡೆಯಲಿವೆ ಎಂದು ತಿಳಿಸಿದರು.
50ಕ್ಕೂ ಹೆಚ್ಚು ತಂಡಗಳು ಭಾಗಿ
ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿಯಲ್ಲಿ 50ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿವೆ. ಈ ಪೈಕಿ ಬಾಲಕಿಯರ 20 ತಂಡಗಳು ಭಾಗವಹಿಸುತ್ತಿವೆ. ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸುವವರಿಗೆ ಬೆಸ್ಟ್ ಅಟ್ಯಾಕರ್, ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಲೀಬ್ರೋ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ.
ಸುವರ್ಣ ಮಹೋತ್ಸವಕ್ಕೆ ಓಟದ ಸ್ಪರ್ಧೆ
ಇನ್ನು, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಆ.14ರಂದು ನೆಹರು ಕ್ರೀಡಾಂಗಣದಿಂದ ಓಟದ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಾಥಮಿಕ ಶಾಲೆ ಬಾಲಕ, ಬಾಲಕಿಯರಿಗೆ ಮತ್ತು ಪ್ರೌಢಶಾಲಾ ಬಾಲಕಿಯರಿಗೆ 3 ಕಿ.ಮೀ, ಪ್ರೌಢಶಾಲೆ ಬಾಲಕರಿಗೆ 5 ಕಿ.ಮೀ ಸ್ಪರ್ಧೆ ಆಯೋಜಿಸಲಾಗಿದೆ. ಆಸಕ್ತರು 9945833464, 8971452532, 8884895404, 9964796101 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರಾದ ಹೇಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದಿಚುಂಚನಗಿರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ವಾಸಪ್ಪ, ಪ್ರಮುಖರಾದ ಸತೀಶ್.ಡಿ.ವಿ, ಶಶಿಕುಮಾರ್, ಮೇಘರಾಜ್ ಉಪಸ್ಥಿತರಿದ್ದರು.