ಬೆಂಗಳೂರಿನಲ್ಲಿ ದಾಖಲೆ ನಿರ್ಮಿಸಿ ಪದಕ ಗೆದ್ದ ಶಿವಮೊಗ್ಗದ ಕ್ರೀಡಾಪಟುಗಳು

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 16 ವರ್ಷದೊಳಗಿನವರ ಕಿರಿಯರ ಅಥ್ಲೆಟಿಕ್ಸ್ ಚ್ಯಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡಿದ್ದಾರೆ. ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಪದಕಗಳನ್ನು ಬಾಚಿಕೊಳ್ಳುವುದರ ಜೊತೆಗೆ ದಾಖಲೆಗಳನ್ನು ನಿರ್ಮಿಸಿದ್ದಾರೆ.

Shivamogga-Children-won-in-sports-held-at-Bangalore

ಉದ್ದಜಿಗಿತದಲ್ಲಿ ಲೋಹಿತ್ ಗೌಡ ಬಿ.ಸಿ ಕೂಟ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆದರೆ, ಪೆಂಟಾತ್ಲಾನ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಆರೋನ್ ಎನ್.ಬಿ ಎತ್ತರ ಜಿಗಿತದಲ್ಲಿ ಕೂಟ ದಾಖಲೆಯೊಂದಿಗೆ ಪ್ರಥಮ, ಪದ್ಮಾವತಿ ಜಾವೆಲಿನ್ ಎಸೆತದಲ್ಲಿ ಕೂಟ ದಾಖಲೆಯೊಂದಿಗೆ ಪ್ರಥಮ ಸ್ಥಾನಕ್ಕೆ ಗಳಿಸಿದ್ದಾರೆ. ಶರತ್.ಹೆಚ್ ಹಾಗೂ ಆರಾಧ್ಯ ಎಸ್.ಗೌಡ ಟ್ರೈಯಾತ್ಲನ್ ಎ ಗ್ರೂಪ್‌ನಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಂಶಿ.ಟಿ 60 ಮೀ ಓಟದಲ್ಲಿ ದ್ವಿತೀಯ, ದಿಗಂತ್ ಕೆ.ಡಿ ಎತ್ತರ ಜಿಗಿತದಲ್ಲಿ ದ್ವಿತೀಯ ಮತ್ತು ಅಪೂರ್ವ ಹೆಚ್.ಎನ್ 600 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಈ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಸತಿ ನಿಲಯದಲ್ಲಿ ತರಬೇತುದಾರ ಬಾಳಪ್ಪ ಮಾನೆ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಕ್ರೀಡಾಪಟುಗಳ ಸಾಧನೆಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ, ಶಿವಮೊಗ್ಗ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಉದಯಕುಮಾರ್ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ