ಬೆಂಗಳೂರು: ವಿಧಾನ ಪರಿಷತ್‌ನ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನಗೊಳ್ಳುವವರ (Nominate) ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯಪಾಲರ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಲಾಗಿದೆ. ಆರತಿ ಕೃಷ್ಣ, ರಮೇಶ್ ಬಾಬು, ದಿನೇಶ್ ಅಮೀನ್‌ಮಟ್ಟು ಮತ್ತು ಡಿ.ಜಿ. ಸಾಗರ್ ಅವರ ಹೆಸರನ್ನು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.
ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್, ಪ್ರಕಾಶ್ ಕೆ. ರಾಥೋಡ್, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ, ಸಿ.ಪಿ.ಯೋಗೇಶ್ವರ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ನಾಲ್ವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ನಾಮನಿರ್ದೇಶಿತ ಸದಸ್ಯರ ಪರಿಚಯ
- ಆರತಿ ಕೃಷ್ಣ ಅವರು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
- ರಮೇಶ್ ಬಾಬು ಪ್ರಸ್ತುತ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾಗಿದ್ದಾರೆ.
- ದಿನೇಶ್ ಅಮೀನ್ ಮಟ್ಟು ಅವರು ಪತ್ರಕರ್ತ, 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾಗಿದ್ದರು.
- ಡಿ.ಜಿ. ಸಾಗರ್ ದಲಿತ ಸಂಘರ್ಷ ಸಮಿತಿಯ ಪ್ರಮುಖ ನಾಯಕರಲ್ಲಿ ಒಬ್ಬರು.
ಈ ನಾಲ್ವರ ನೇಮಕದೊಂದಿಗೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಸಂಖ್ಯಾಬಲ 37ಕ್ಕೆ ಏರಿಕೆಯಾಗಲಿದೆ. ಮೇಲ್ಮನೆಯಲ್ಲಿ ಪಕ್ಷವು ಬಹುಮತ ಗಳಿಸಲಿದೆ. ಪ್ರಸ್ತುತ, ಸಭಾಪತಿ ಸೇರಿಯೂ ಬಿಜೆಪಿ 30, ಜೆಡಿಎಸ್ 7 ಸದಸ್ಯರ ಬಲ ಹೊಂದಿವೆ. ಲಖನ್ ಜಾರಕಿಹೊಳಿ ಪಕ್ಷೇತರರಾಗಿದ್ದಾರೆ. ಈ ಬೆಳವಣಿಗೆಯು ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ನಿರ್ಣಾಯಕ ವಿಷಯಗಳನ್ನು ಅಂಗೀಕರಿಸಲು ಹೆಚ್ಚಿನ ಅನುಕೂಲ ಕಲ್ಪಿಸಲಿದೆ.

ಇದನ್ನೂ ಓದಿ » ಭದ್ರಾವತಿ VISLಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ, ಎಲ್ಲೆಲ್ಲಿ ಭೇಟಿ ನೀಡಿದರು? ಯಾರನ್ನೆಲ್ಲ ಭೇಟಿಯಾದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200