ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
STATE NEWS : ಗೋಬಿ ಮಂಚೂರಿ ಬಳಿಕ ಈಗ ಕಬಾಬ್‌ನಲ್ಲಿ (KABAB) ಹಾನಿಕಾರಕ ಕೃತಕ ಬಣ್ಣ ಪತ್ತೆಯಾಗಿದೆ. ಈ ಹಿನ್ನೆಲೆ ಕಬಾಬ್‌ಗೆ ಕೃತಕ ಬಣ್ಣ ಬಳಕೆ ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಆದೇಶಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ಸೇರಿದ ವಿವಿಧ ಮಾದರಿ ಸಂಗ್ರಹ
ರಾಜ್ಯದ್ಯಂತ ಕಬಾಬ್‌ನ ಗುಣಮಟ್ಟ, ಕೃತಕ ಬಣ್ಣ ಬಳಕೆ ಕುರಿತು ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ 39 ಕಡೆಗಳಲ್ಲಿ ಕಬಾಬ್‌ನ ಮಾದರಿ ಸಂಗ್ರಹಿಸಲಾಗಿತ್ತು. ಲ್ಯಾಬ್‌ನಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 8 ಮಾದರಿಯ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ಮಾಡಿರುವುದು ಪತ್ತೆಯಾಗಿದೆ. ಈ ಪೈಕಿ 7 ಮಾದರಿಯಲ್ಲಿ ಸನ್‌ಸೆಟ್ ಯಲ್ಲೋ, 1 ಮಾದರಿಯಲ್ಲಿ ಕಾರ್ಮೋಸಿನ್ ಹೊಂದಿರುವುದು ಬೆಳಕಿಗೆ ಬಂದಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ. ಕಳೆದ ವಾರ ಶಿವಮೊಗ್ಗದ ವಿವಿಧೆಡೆಯು ಅಧಿಕಾರಿಗಳು ದಾಳಿ ನಡೆಸಿ ಮಾದರಿ ಪಡೆದಿದ್ದರು.
ತಕ್ಷಣದಿಂದಲೇ ಕೃತಕ ಬಣ್ಣ ನಿಷೇಧ
ಇನ್ಮುಂದೆ ಯಾವುದೇ ವೆಜ್, ಚಿಕನ್, ಫಿಶ್ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ. ತಕ್ಷಣದಿಂದಲೆ ಆದೇಶ ಜಾರಿಗೆ ಬಂದಿದ್ದು, ಉಲ್ಲಂಘಿಸಿದವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಇದನ್ನೂ ಓದಿ – ಪೆಟ್ರೋಲ್, ಡಿಸೇಲ್ ದರ ಹೆಚ್ಚಳ, ಶಿವಮೊಗ್ಗದಲ್ಲಿ ಲಾರಿ ಮಾಲೀಕರ ಆಕ್ರೋಶ, ಏನಂದ್ರು?