ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
KARNATAKA GOVERNMENT : ವಿದ್ಯುತ್ ಬಳಕೆದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಜನವರಿ ತಿಂಗಳಲ್ಲಿ ವಿದ್ಯುತ್ ಬಿಲ್ ಹೊರೆ ತುಸು ಕಡಿಮೆಯಾಗಲಿದೆ. ನವೆಂಬರ್ ತಿಂಗಳಲ್ಲಿ ಇಂಧನ ಮತ್ತು ವಿದ್ಯುತ್ ಖರೀದಿ ಹೊಂದಾಣಿಕೆ ವೆಚ್ಚ ಇಳಿಕೆಯಾಗಿದೆ. ಆದ್ದರಿಂದ ಜನವರಿ ತಿಂಗಳ ವಿದ್ಯುತ್ ಬಿಲ್‌ನಲ್ಲಿ ಪ್ರತಿ ಯುನಿಟ್‌ಗೆ 3 ಪೈಸೆಯಿಂದ 51 ಪೈಸೆವರೆಗೂ ಕಡಿತ ಮಾಡಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ನಿರ್ಧರಿಸಿದೆ. ಈ ಸಂಬಂಧ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪೋಡಿ, ಸರ್ವೆ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಲಾಗಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್) ಸಲ್ಲಿಸುವ ಪ್ರತಿ ಅರ್ಜಿಗೆ ಪರಿಷ್ಕೃತ ಶುಲ್ಕ ನಿಗದಿ ಪಡಿಸಲಾಗಿದೆ. 11 ಇ ನಕ್ಷೆ, ತತ್ಕಾಲ್ ಪೋಡಿ, ಭೂ ಪರಿವರ್ತನೆ ಪೂರ್ವನಕ್ಷೆ ಶುಲ್ಕ ಪ್ರತಿ 2 ಎಕರೆಗೆ ನಗರ ಪ್ರದೇಶದಲ್ಲಿ 2500 ರೂ., ಗ್ರಾಮೀಣ ಭಾಗದಲ್ಲಿ 1500 ರೂ. 2 ಎಕರೆ ಬಳಿಕ ಪ್ರತಿ ಎಕರೆಗೆ ನಗರ ಪ್ರದೇಶದಲ್ಲಿ 1 ಸಾವಿರ ರೂ., ಗ್ರಾಮೀಣ ಭಾಗದಲ್ಲಿ 400 ರೂ. ನಿಗದಿಪಡಿಸಲಾಗಿದೆ. ಇನ್ನು, ಜಮೀನು ಹದ್ದುಬಸ್ತಿಗೆ 2 ಎಕರೆವರೆಗೆ ನಗರ ಪ್ರದೇಶದಲ್ಲಿ 2 ಸಾವಿರ ರೂ., ಗ್ರಾಮೀಣ ಭಾಗದಲ್ಲಿ 500 ರೂ., 2 ಎಕರೆಗಿಂತಲು ಹೆಚ್ಚಿನ ಜಾಗಕ್ಕೆ ನಗರ ಪ್ರದೇಶದಲ್ಲಿ ಪ್ರತಿ ಎಕರೆಗೆ 400 ರೂ., ಗ್ರಾಮೀಣ ಭಾಗದಲ್ಲಿ 300 ರೂ. ನಿಗದಿಪಡಿಸಲಾಗಿದೆ.
7 ಸಾವಿರ ರೈತರಿಗೆ ಹಕ್ಕುಪತ್ರ
ಅರಣ್ಯ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿರುವ 7 ಸಾವಿರ ರೈತರಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ನಿಗದಿತ ಅವಧಿ ಒಳಗೆ ಅರ್ಜಿ ಸಲ್ಲಿಸಿದ್ದವರಿಗೆ ಹಕ್ಕು ಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಉಚಿತ ಟಿಕೆಟ್ ಮೌಲ್ಯ 3 ಸಾವಿರ ಕೋಟಿ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಚಿತ ಟಿಕೆಟ್ ಮೌಲ್ಯ 3 ಸಾವಿರ ಕೋಟಿ ರೂ.ಗೆ ತಲುಪಿದೆ. ಈವರೆಗೆ ಮಹಿಳಾ ಪ್ರಯಾಣಿಕರ ಸಂಖ್ಯೆ 126 ಕೋಟಿಗೆ ತಲುಪಿದೆ. ‘ಭವಿಷ್ಯದಲ್ಲಿ ಸೇವೆ ಇನ್ನಷ್ಟು ಉತ್ತಮವಾಗಲಿದೆ. ಯಾರಿಗು ತೊಂದರೆ ಆಗದಂತೆ ಅಗತ್ಯವಿರುವ ಕಡೆಗೆ ಹೆಚ್ಚುವರಿ ಬಸ್ ಓಡಿಸಲಾಗುತ್ತದೆʼ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ – ಮೇಲೆ ಸಚಿವರ ಸಭೆ, ಕೆಳಗೆ ಕರೆಂಟ್ ಇಲ್ಲದೆ ನೆಲದ ಮೇಲೆ ಕುಳಿತ ಜನ, ಶಿವಮೊಗ್ಗದಲ್ಲಿ ಇದೆಂಥಾ ಅವಸ್ಥೆ?