ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌, ತುಟ್ಟಿ ಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರ ತುಟ್ಟಿಭತ್ಯೆಯನ್ನು (ಡಿಎ) ಶೇ 1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ನೌಕರರ ತುಟ್ಟಿಭತ್ಯೆಯು ಮೂಲ ವೇತನದ ಶೇ 14.25ರಿಂದ ಶೇ 15.75ಕ್ಕೆ ಏರಿಕೆಯಾದಂತಾಗಿದೆ.

ಈ ಪರಿಷ್ಕೃತ ದರವು  ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

VIDHANA-SOUDHA-GENERAL-IMAGE.jpg

  • ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗಲಿದ್ದರೂ, ಸುಮಾರು 5.35 ಲಕ್ಷ ಜನರಿಗೆ ನೇರ ಲಾಭ.
  • ಅನುದಾನಿತ ಸಂಸ್ಥೆಗಳು ಹಾಗೂ ನಿಗಮ ಮಂಡಳಿಗಳ ಸುಮಾರು 3 ಲಕ್ಷ ನೌಕರರಿಗೂ ಇದು ಅನ್ವಯ.
  • ಸುಮಾರು 4.50 ಲಕ್ಷ ಪಿಂಚಣಿದಾರರಿಗೆ ಆರ್ಥಿಕ ನೆರವು ಸಿಗಲಿದೆ.

ತುಟ್ಟಿಭತ್ಯೆ ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಧನ್ಯವಾದ ತಿಳಿಸಿದ್ದಾರೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 12, 2026 at 10:40 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 12, 2026