SHIVAMOGGA LIVE NEWS | 22 JULY 2024
SHIMOGA : ವಿನೋಬನಗರದಲ್ಲಿರುವ ಉಪ ನೋಂದಣಾಧಿಕಾರಿ (Sub Registrar) ಕಚೇರಿ ಸ್ಥಳಾಂತರ ವಿಚಾರ ಇವತ್ತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಯ್ತು. ಈ ಸಂಬಂಧ ಶಾಸಕ ಎಸ್.ಎನ್.ಚನ್ನಬಸಪ್ಪ ಸದನಲ್ಲಿ ಪ್ರಸ್ತಾಪಿಸಿದರು.
![]() |
ಚನ್ನಬಸಪ್ಪ ಪ್ರಸ್ತಾಪ ಮಾಡಿದ್ದೇನು?
ಉಪ ನೋಂದಣಾಧಿಕಾರಿ ಕಚೇರಿ ಕಟ್ಟಡ ಅತ್ಯಂತ ಇಕ್ಕಟ್ಟಾಗಿದೆ. ಎಪಿಎಂಸಿ ಆವರಣಕ್ಕೆ ಅದನ್ನು ಸ್ಥಳಾಂತರ ಮಾಡಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿಯೇ ಪ್ರಸ್ತಾಪಿಸಿದ್ದೆ. ಆದರೆ ಒಂದೂವರೆ ವರ್ಷವಾದರೂ ಸ್ಥಳಾಂತರವಾಗಿಲ್ಲ. ನಾಗರಿಕರ ಹಿತದೃಷ್ಟಿಯಿಂದ ಕೂಡಲೆ ಸ್ಥಳಾಂತರ ಮಾಡಿ ಎಂದು ಸದನದಲ್ಲಿ ಚನ್ನಬಸಪ್ಪ ಮನವಿ ಮಾಡಿದರು.
ಕಂದಾಯ ಸಚಿವರು ಹೇಳಿದ್ದೇನು?
ಇದಕ್ಕೆ ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಶಿವಮೊಗ್ಗದ ಉಪ ನೋಂದಣಾಧಿಕಾರಿ ಕಚೇರಿಗೆ ಈಚೆಗೆ ಭೇಟಿ ನೀಡಿದ್ದೆ. ಮೆಟ್ಟಿಲುಗಳು ಸಣ್ಣದಿವೆ. ಕಚೇರಿಯಲ್ಲಿ ಜನ ಕೂರಲು ಸ್ಥಳಾವಕಾಶವಿಲ್ಲ. ಅಂಗವಿಕಲರು ಮೊದಲ ಮಹಡಿಗೆ ಹತ್ತಿ ಹೋಗಲು ಕಷ್ಟವಾಗುತ್ತದೆ. ಶಿವಮೊಗ್ಗದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲು ಸ್ಥಳಾಂತರದ ಚರ್ಚೆಯಾಗಿತ್ತು. ಆದರೆ ಕಚೇರಿ ಸ್ಥಳಾಂತರ ಮಾಡಬೇಕೋ, ಹೊಸ ಕಟ್ಟಡ ನಿರ್ಮಿಸಬೇಕೋ ಎಂಬ ಚರ್ಚೆಯಾಗುತ್ತಿದೆ. ಅದ್ದರಿಂದ ಪ್ರಕ್ರಿಯೆ ವಿಳಂಬವಾಗಿದೆ. ಇನ್ನೊಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಇನ್ನೊಂದು ತಿಂಗಳ ಒಳಗೆ ಎಲ್ಲವು ಸ್ಪಷ್ಟವಾಗಲಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಚನ್ನಬಸಪ್ಪ, ಸದ್ಯಕ್ಕೆ ಉಪ ನೋಂದಣಾಧಿಕಾರಿ ಕಚೇರಿಯನ್ನು ಎಪಿಎಂಸಿಗೆ ಸ್ಥಳಾಂತರ ಮಾಡಿ. ಆ ಬಳಿಕ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಎಂದರು. ಈ ಕುರಿತು ಅಧಿಕಾರಿಗಳ ಜೊತೆಗೆ ಸಮಾಲೋಚನೆ ಬಳಿಕ ನಿರ್ಧಾರ ಪ್ರಕಟಿಸುತ್ತೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಇದನ್ನೂ ಓದಿ ⇓
ಎರಡು ದಿನ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಿನಿಸ್ಟರ್ ಪರಿಶೀಲನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200