ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿನೋಬನಗರದಲ್ಲಿರುವ ಉಪ ನೋಂದಣಾಧಿಕಾರಿ (Sub Registrar) ಕಚೇರಿ ಸ್ಥಳಾಂತರ ವಿಚಾರ ಇವತ್ತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಯ್ತು. ಈ ಸಂಬಂಧ ಶಾಸಕ ಎಸ್.ಎನ್.ಚನ್ನಬಸಪ್ಪ ಸದನಲ್ಲಿ ಪ್ರಸ್ತಾಪಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಚನ್ನಬಸಪ್ಪ ಪ್ರಸ್ತಾಪ ಮಾಡಿದ್ದೇನು?
ಉಪ ನೋಂದಣಾಧಿಕಾರಿ ಕಚೇರಿ ಕಟ್ಟಡ ಅತ್ಯಂತ ಇಕ್ಕಟ್ಟಾಗಿದೆ. ಎಪಿಎಂಸಿ ಆವರಣಕ್ಕೆ ಅದನ್ನು ಸ್ಥಳಾಂತರ ಮಾಡಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿಯೇ ಪ್ರಸ್ತಾಪಿಸಿದ್ದೆ. ಆದರೆ ಒಂದೂವರೆ ವರ್ಷವಾದರೂ ಸ್ಥಳಾಂತರವಾಗಿಲ್ಲ. ನಾಗರಿಕರ ಹಿತದೃಷ್ಟಿಯಿಂದ ಕೂಡಲೆ ಸ್ಥಳಾಂತರ ಮಾಡಿ ಎಂದು ಸದನದಲ್ಲಿ ಚನ್ನಬಸಪ್ಪ ಮನವಿ ಮಾಡಿದರು.
ಇದಕ್ಕೆ ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಶಿವಮೊಗ್ಗದ ಉಪ ನೋಂದಣಾಧಿಕಾರಿ ಕಚೇರಿಗೆ ಈಚೆಗೆ ಭೇಟಿ ನೀಡಿದ್ದೆ. ಮೆಟ್ಟಿಲುಗಳು ಸಣ್ಣದಿವೆ. ಕಚೇರಿಯಲ್ಲಿ ಜನ ಕೂರಲು ಸ್ಥಳಾವಕಾಶವಿಲ್ಲ. ಅಂಗವಿಕಲರು ಮೊದಲ ಮಹಡಿಗೆ ಹತ್ತಿ ಹೋಗಲು ಕಷ್ಟವಾಗುತ್ತದೆ. ಶಿವಮೊಗ್ಗದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲು ಸ್ಥಳಾಂತರದ ಚರ್ಚೆಯಾಗಿತ್ತು. ಆದರೆ ಕಚೇರಿ ಸ್ಥಳಾಂತರ ಮಾಡಬೇಕೋ, ಹೊಸ ಕಟ್ಟಡ ನಿರ್ಮಿಸಬೇಕೋ ಎಂಬ ಚರ್ಚೆಯಾಗುತ್ತಿದೆ. ಅದ್ದರಿಂದ ಪ್ರಕ್ರಿಯೆ ವಿಳಂಬವಾಗಿದೆ. ಇನ್ನೊಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಇನ್ನೊಂದು ತಿಂಗಳ ಒಳಗೆ ಎಲ್ಲವು ಸ್ಪಷ್ಟವಾಗಲಿದೆ ಎಂದು ತಿಳಿಸಿದರು.ಕಂದಾಯ ಸಚಿವರು ಹೇಳಿದ್ದೇನು?
ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಚನ್ನಬಸಪ್ಪ, ಸದ್ಯಕ್ಕೆ ಉಪ ನೋಂದಣಾಧಿಕಾರಿ ಕಚೇರಿಯನ್ನು ಎಪಿಎಂಸಿಗೆ ಸ್ಥಳಾಂತರ ಮಾಡಿ. ಆ ಬಳಿಕ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಎಂದರು. ಈ ಕುರಿತು ಅಧಿಕಾರಿಗಳ ಜೊತೆಗೆ ಸಮಾಲೋಚನೆ ಬಳಿಕ ನಿರ್ಧಾರ ಪ್ರಕಟಿಸುತ್ತೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.