ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ತಡೆ ಹಿಡಿಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಮಾಹಿತಿ ಕುರಿತು ಸರ್ಕಾರಿ ನೌಕರರ ಸಂಘ ಸ್ಪಷ್ಟನೆ ನೀಡಿದೆ.
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಈ ರೀತಿಯ ನಿರ್ಧಾರ ಕೈಗೊಳ್ಳುವಾಗ ನೌಕರರ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ಜೊತೆಗೆ ಸರ್ಕಾರ ಚರ್ಚಿಸುತ್ತದೆ. ಆದರೆ ಈತನಕ ಯಾವುದೆ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಒಂದು ತಿಂಗಳ ಸಂಬಳ ಕಡಿತ ಮಾಡುವ ವಿಚಾರ ಸತ್ಯಕ್ಕೆ ದೂರವಾದದ್ದು. ಆದ್ದರಿಂದ ನೌಕರರು ಗೊಂದಲಕ್ಕೀಡಾಗಬಾರದು ಎಂದು ಷಡಾಕ್ಷರಿ ತಿಳಿಸಿದ್ದಾರೆ.