ಗೃಹಲಕ್ಷ್ಮಿ ಯೋಜನೆ: ಬಾಕಿ ಕಂತು ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರತಿಕ್ರಿಯೆ, ಏನಂದ್ರು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಬೆಳಗಾವಿ: ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಬಾಕಿ ಕಂತು ಮುಂದಿನ ನಾಲ್ಕೈದು ದಿನಗಳಲ್ಲಿ ಹಾಗೂ ಏಪ್ರಿಲ್ ತಿಂಗಳ ಕಂತು ಇನ್ನು 8 ರಿಂದ 10 ದಿನಗಳಲ್ಲಿ ಫಲಾನುಭವಿಗಳ (Beneficiaries) ಖಾತೆಗೆ ನೇರವಾಗಿ ಜಮೆಯಾಗಲಿದೆ (Direct Benefit Transfer – DBT) ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಬೆಳಗಾವಿ ತಾಲೂಕಿನ ಬಾಕನೂರು ಗ್ರಾಮದ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಪ್ರಕ್ರಿಯೆ ಚಾಲನೆಯಲ್ಲಿದೆ. ತಾಂತ್ರಿಕ ಕಾರಣಗಳಿಂದ (Technical reasons) ವಿಳಂಬವಾಗಿದ್ದ ಬಾಕಿ ಹಣ ಶೀಘ್ರದಲ್ಲೇ ಮಹಿಳೆಯರ ಕೈ ಸೇರಲಿದೆ ಎಂದು ಅವರು ಭರವಸೆ ನೀಡಿದರು.

Gruhalakshmi-Scheme-government-of-karnataka.