ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 SEPTEMBER 2023
ಮಾಜಿ ಮಿನಿಸ್ಟರ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
FATAFAT-NEWS-1CHIKKAMAGALURU : ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹಮದ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದ್ದು ದೂರು ದಾಖಲಾಗಿದೆ. ಸಗೀರ್ ಅಹಮದ್ ಪುತ್ರ ಅತೀ ಉರ್ ರಹಮಾನ್ ಪತ್ನಿ ಶಿಂಷಿಯಾ ಸಹರ್ ಅವರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿಧ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ.
ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ
FATAFAT-NEWS-2YADAGIRI : ಆಸ್ತಿ ಆಸೆಗಾಗಿ ಮಲತಾಯಿಯೊಬ್ಬಳು ಹಾಲಿನಲ್ಲಿ ವಿಷ ಬೆರೆಸಿ ಐದು ತಿಂಗಳ ಹಸುಗೂಸನ್ನು ಕೊಂದ ಅಮಾನವೀಯ ಘಟನೆಯೊಂದು ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.  ದೇವಮ್ಮ ಚೆಟ್ಟಿಗೇರಿ ಎಂಬಾಕೆಯೇ ಮಗುವನ್ನ ಕೊಂದ ಪಾಪಿ ಮಲತಾಯಿ.  ಐದು ತಿಂಗಳ ಸಂಗೀತಾ ಚೆಟ್ಟಿಗೇರಿ ಮೃತ ಹಸುಗೂಸು. ಘಟನೆ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ದೇವಮ್ಮಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ನೇಣು ಬಿಗಿದು ರೈತ ಆತ್ಮಹತ್ಯೆ
FATAFAT-NEWS-3CHIKKAMAGALURU : ಬರಗಾಲದಿಂದ ಬೇಸತ್ತು ರೈತನೊಬ್ಬ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಪರಮೇಶ್ವರಪ್ಪ(52) ಎಂಬಾತನೇ ನೇಣಿಗೆ ಕೊರಳೊಡ್ಡಿದ ರೈತ. ಸಕಾಲಕ್ಕೆ ಮಳೆಯಾಗದೇ ಬೆಳೆ ನಾಶವಾದ ಹಿನ್ನೆಲೆ ಮನನೊಂದು ರೈತ ಪರಮೇಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾವೇರಿ ಹೋರಾಟಕ್ಕೆ ಸಿದ್ದರಾಗುವಂತೆ ಹೆಚ್‌ಡಿಕೆ ಸೂಚನೆ

FATAFAT NEWS 4 jpgBENGALURU : ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಕುಮಾರಸ್ವಾಮಿಯವರು (HD Kumaraswamy) ಕಾವೇರಿ ನೀರಿಗಾಗಿ ಹೋರಾಟ ಆರಂಭಿಸುವಂತೆ ಆಸ್ಪತ್ರೆಯಿಂದಲೇ ಕರೆ ಕೊಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿಯವರು ಇದೀಗ ಚೇತರಿಸಿಕೊಳ್ಳುತ್ತಿದ್ದು, ನಾಳೆ ಆಸ್ಪತ್ರೆಯಿಂದ  ಡಿಸ್ಚಾರ್ಜ್ ಆಗಲಿದ್ದಾರೆ. ಹೆಚ್ಡಿಕೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿಯವರಿಗೆ  ಜೆಡಿಎಸ್‌ನಿಂದ ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಅಂತ ಹೆಚ್ಡಿಕೆ ಕರೆ ಕೊಟ್ಟಿದ್ದಾರೆನ್ನಲಾಗಿದೆ.
ವಿದ್ಯುತ್ ಶಾಕ್, ತಂದೆ, ಮಗ ಸಾವು
FATAFAT NEWS 5 jpgBELAGAVI :  ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ಪ್ರಭು ಹುಂಬಿ(69), ಮಂಜುನಾಥ ಹುಂಬಿ ( 29)  ಸಾವನ್ನಪ್ಪಿದ  ದುರ್ದೈವಿಗಳು.  ತಂದೆ ಪ್ರಭು ಹುಂಬಿ ಮನೆ ಮುಂದೆ ಕಸ ತೆಗೆಯುತ್ತಿದ್ದಾಗ  ವಿದ್ಯುತ್ ತಂತಿ ಸ್ಪರ್ಶಿಸಿದೆ.  ಇವರನ್ನು ಬಿಡಿಸಲು ಹೋದ ಮಗ ಮಂಜುನಾಥ ಹುಂಬಿ ಕೂಡ ವಿದ್ಯುತ್‌ ಶಾಕ್‌ ತಗುಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment