ರಾಜ್ಯದಲ್ಲಿ ಮತ್ತಷ್ಟು ತೀವ್ರವಾಗಲಿದೆ ಚಳಿ, ಹವಾಮಾನ ಇಲಾಖೆ ಎಚ್ಚರಿಕೆ ಏನು?

ಶಿವಮೊಗ್ಗ
LIVE

ಬೆಂಗಳೂರು: ರಾಜ್ಯದಲ್ಲಿ ಚಳಿಯ (Cold) ತೀವ್ರತೆ ಹೆಚ್ಚಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ 4 ರಿಂದ 6 ಡಿಗ್ರಿ ಸೆಲ್ಸಿಯಸ್‌ ಕುಸಿತವಾಗಿದೆ. ಇದರಿಂದ ಮಧ್ಯರಾತ್ರಿ ಮತ್ತು ಮುಂಜಾನೆ ಥಂಡಿ ಅನುಭವವಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಆವರಿಸುತ್ತಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತಂಪಾದ ಗಾಳಿ ಬೀಸುತ್ತಿರುವ ಹಿನ್ನೆಲೆ ಹಗಲಿನಲ್ಲೂ ಚಳಿಯ ಅನುಭವಾಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಈ ತೀವ್ರತೆ ಚಳಿ ಶುರುವಾಗಬೇಕಿತ್ತು. ಈ ಬಾರಿ ವಾಡಿಕೆಗಿಂತ ಮೊದಲೇ ಚಳಿ ಶುರುವಾಗಿದ್ದು, ದಿನೇದಿನೆ ತೀವ್ರತೆ ಹೆಚ್ಚುತ್ತಿದೆ. ಡಿಸೆಂಬರ್, ಜನವರಿಯಲ್ಲಿ ಮತ್ತಷ್ಟು ಚಳಿಯಾಗಲಿದೆ.

ಭೂಮಿಯಲ್ಲಿ ತೇವಾಂಶ, ಮೋಡ ಕವಿದ ವಾತಾವರಣ ಸೇರಿ ಇತರ ಕಾರಣಗಳಿಂದ ರಾಜ್ಯದಲ್ಲಿ ಈಗಾಗಲೇ ಚಳಿ ಹೆಚ್ಚಾಗುತ್ತಿದೆ. ಬಂಗಾಳದ ಉಪಸಾಗರದಿಂದ ಅಥವಾ ದಕ್ಷಿಣದ ಹಿಂದು ಮಹಾಸಾಗರದಿಂದ ಗಾಳಿ ಬೀಸಿದರೆ ಗರಿಷ್ಠ, ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ಕುಸಿತವಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತು ನೈಋತ್ಯ ರೈಲ್ವೆಯಿಂದ ಮಹತ್ವದ ಅಪ್‌ಡೇಟ್‌

Cold

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment