ಶಿವಮೊಗ್ಗ ಲೈವ್
ಕರ್ನಾಟಕ ನ್ಯೂಸ್: ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ವಿವಿಧೆಡೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಿದೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್ಸೈಟ್ನಲ್ಲಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 19ರಂದು ಜೋರು ಮಳೆ ಸುರಿಯಲಿದೆ. ಕರಾವಳಿ ಭಾಗದಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಮಳೆ ಅಬ್ಬರಿಸುವ ನಿರೀಕ್ಷೆ ಇದೆ. ಈಶಾನ್ಯ ಮುಂಗಾರು ಚುರುಕುಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ತುಸು ಕಡಿಮೆಯಿರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ.
