ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 MARCH 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಂಗಳೂರು / ಶಿವಮೊಗ್ಗ : ರಾಮೇಶ್ವರಂ ಕೆಫೆ ಹೊಟೇಲ್‌ನಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ದಾಳಿ ನಡೆಸಿ, ಪರಿಶೀಲಿಸಿದರು.
ಬೆಂಗಳೂರು : ಆದಾಯಕ್ಕೂ ಮೀರು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧೆಡೆ 60 ಕಡೆ ಶೋಧ ಕಾರ್ಯಾಚರಣೆ ನಡೆಸಲಾಯಿತು. ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಆಸ್ತಿ, ವಾಹನಗಳ ದಾಖಲೆಗಳು ವಶಕ್ಕೆ.
ಬೆಂಗಳೂರು : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 14 ಕ್ಷೇತ್ರಗಳಲ್ಲಿ ಇವತ್ತು ಅಧಿಸೂಚನೆ ಹೊರಡಿಸಲಾಗುತ್ತದೆ. ಏ.4 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಈ ಕ್ಷೇತ್ರಗಳಲ್ಲಿ ಏ.26ರಂದು ಮತದಾನ ನಡೆಯಲಿದೆ.
ಚಾಮರಾಜನಗರ : ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ದೇಗುಲದ ಹುಂಡಿಗಳಲ್ಲಿ ಕಳೆದ 25 ದಿನದಲ್ಲಿ 3.13 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಈವರೆಗೂ ತಿಂಗಳಿಗೆ 2.90 ಕೋಟಿ ರೂ. ಕಾಣಿಕೆ ಸಂಗ್ರಹವಾಗುತ್ತಿತ್ತು. ಈ ಬಾರಿ ಕಾಣಿಕೆ ಹಣ ಎಣಿಕೆ ವೇಳೆ ಎರಡು ಅಮೆರಿಕನ್ ಡಾಲರ್, ಒಂದು ಬಾಂಗ್ಲಾದೇಶದ ನೋಟು, ನೇಪಾಳದ ಎರಡು ನೋಟು, ಮಲೇಷಿಯಾದ ಒಂದು ನೋಟು ಸಿಕ್ಕಿದೆ.
ಧಾರವಾಡ : ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಗುರುಲಿಂಗ ಕಾಪಸೆ (96) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೇಹ ದಾನ ಮಾಡಿದ್ದರಿಂದ ಅವರ ಪಾರ್ಥೀವ ಶರೀರವನ್ನು ಬೈಲಹೊಂಗಲದ ಡಾ. ಮಹಾಂತೇಶ ರಾಮಣ್ಣವರ ಆಸ್ಪತ್ರೆಗೆ ನೀಡಲು ಕುಟುಂಬದವರು ಸಿದ್ಧತೆ ಮಾಡಿಕೊಂಡಿದ್ದಾರೆ.
ಬಳ್ಳಾರಿ : ಪಿಯುಸಿ ದ್ವಿತೀಯ ವರ್ಷದ ಉತ್ತರ ಪತ್ರಿಕೆ ಮೌಲ್ಯಮಾಪನ ವೇಳೆ ಉಪನ್ಯಾಸಕ ಶಂಕರಗೌಡ (42) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳ್ಳಾರಿಯ ಸಂತ ಜಾನ್ ಪಿಯು ಕಾಲೇಜಿನಲ್ಲಿ ಮೌಲ್ಯಮಾಪನದ ವೇಳೆ ಘಟನೆ ಸಂಭವಿಸಿದೆ. ಶಂಕರಗೌಡ ಅವರು ಮಸ್ಕಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿದ್ದರು.
ಬೆಂಗಳೂರು : ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ನಕಲು ಮಾಡಿದ 9 ವಿದ್ಯಾರ್ಥಿಗಳನ್ನು ಬುಧವಾರ ಡಿಬಾರ್ ಮಾಡಲಾಗಿದೆ. ಧಾರವಾಡದಲ್ಲಿ 4, ರಾಯಚೂರಿನಲ್ಲಿ 3, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್ ಮಾಡಲಾಗಿದೆ.
ಕಾರವಾರ : ಉತ್ತಮ ಮಳೆಗಾಗಿ ಪ್ರಾರ್ಥಿಸಿ ಕಾಳಿ ನದಿ ಸಮುದ್ರ ಸೇರುವ ಸಂಗಮ ಸ್ಥಳದಲ್ಲಿ ದೋಣಿಯಲ್ಲಿ ಲಿಂಗ ಪೂಜೆ ಮತ್ತು ವರುಣ ಹೋಮ ನಡೆಸಲಾಯಿತು. ಬೆಂಗಳೂರಿನಿಂದ ಆಗಮಿಸಿದ್ದ ವೈದಿಕರ ತಂಡ ಪೂಜೆ ಸಲ್ಲಿಸಿದೆ. ಹಿಂದೆ ಇದೇ ರೀತಿ ಹೋಮ ಮಾಡಿದ್ದಾಗ ಉತ್ತಮ ಮಳೆಯಾಗಿತ್ತು.
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿದೆ. ಎರಡು ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಂಭವವಿದೆ.
ಬೆಂಗಳೂರು : ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಲಿದೆ. ಈ ಹಿನ್ನೆಲೆ ಮುಂಚಿತವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆ ಸರ್ಕಾರದ ಆದ್ಯತೆಯಾಗಿದೆ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಇದನ್ನೂ ಓದಿ – ಅಡಿಕೆ ಧಾರಣೆ | 27 ಮಾರ್ಚ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?