ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | KARNATAKA TOP 5 NEWS | 10 ಜೂನ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
NEWS 1 – ರಾಜ್ಯದಲ್ಲಿ 192 ಸಾವು
ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 10,959 ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 192 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ನೀಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. 20,246 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2.15 ಲಕ್ಷ ಸಕ್ರಿಯ ಪ್ರಕರಣಗಳಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
NEWS 2 – ಮೂರನೆ ಅಲೆ ಎದುರಿಸಲು ಸಜ್ಜಾಗಿ
ಕರೋನ ಮೂರನೆ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಂದಾಜು ಮಾಡಿದ್ದಾರೆ. ಆದ್ದರಿಂದ ಮೂರನೆ ಅಲೆಯನ್ನು ನಿಯಂತ್ರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ, ಮನೆ ಮನೆಗೂ ಭೇಟಿ ನೀಡಿ ಜಾಗೃತಿ ಮೂಡಿಸುವಂತೆ ಸೂಚಿಸಿದರು. ಅಲ್ಲದೆ ಅಂಗನವಾಡಿ ಕಾರ್ಯಕರ್ತೆಯರನ್ನು ಕರೋನ ವಾರಿಯರ್ ಎಂದು ಘೋಷಿಸಲಾಗಿದೆ. ಮೊದಲ ಅಲೆಯಲ್ಲಿ ಮೃತರಾದ 20 ಕಾರ್ಯಕರ್ತೆಯರಿಗೆ ತಲಾ 30 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದರು.
NEWS 3 – ಗ್ರಾಹಕರ ಜೇಬಿಗೆ ವಿದ್ಯುತ್ ಶಾಕ್
ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಿಗೆ ರಾಜ್ಯದಲ್ಲಿ ಪ್ರತಿ ಯುನಿಟ್ ವಿದ್ಯುತ್ ದರವು ಹೆಚ್ಚಳವಾಗಿದೆ. ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರತಿ ಯುನಿಟ್ ವಿದ್ಯುತ್ ದರದಲ್ಲಿ 30 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶಿಸಿದೆ. ಏಪ್ರಿಲ್ 1ರಿಂದ ಹೊಸ ದರ ಪೂರ್ವಾನ್ವಯವಾಗಲಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಹಿಂಬಾಕಿಯನ್ನು ಸಮಾನ ಕಂತುಗಳಲ್ಲಿ ವಸೂಲು ಮಾಡಲು ಅಯೋಗ ಅವಕಾಶ ನೀಡಿದೆ.
NEWS 4 – ಪಿಯು ಕಾಲೇಜುಗಳಿಗೆ ಖಡಕ್ ಎಚ್ಚರಿಕೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡು, ದಾಖಲಾತಿ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚನೆ ನೀಡಿದ್ದರು. ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ದಾಖಲಾತಿ ಮಾಡಿಕೊಳ್ಳುವುದು, ಆನ್ ಲೈನ್ ಕ್ಲಾಸ್ ನಡೆಸಿದರೆ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಮಾನ್ಯತೆಯನ್ನೇ ರದ್ದುಗೊಳಿಸುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ.
NEWS 5 – ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ
ಮುಂದಿನ ವಾರದಿಂದ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳ್ಳಲಿದೆ. ನಾಲ್ಕರಿಂದ ಐದು ಹಂತದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.