ನಂದಿನಿಯಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ, ಇಡ್ಲಿ – ದೋಸೆ ಹಿಟ್ಟು ಪ್ಯಾಕೆಟ್‌ ರಿಲೀಸ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

BANGALORE NEWS, 18 OCTOBER 2024 : ನಂದಿನಿ (Nandini) ಬ್ರ್ಯಾಂಡ್‌ ಹೆಸರಿನಲ್ಲಿಯೇ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು 10 ದಿನಗಳ ಒಳಗೆ ಈ ಹಿಟ್ಟು ಮಾರುಕಟ್ಟೆಯಲ್ಲಿ ದೊರೆಯಲಿದೆ.

ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿಯೇ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡಲು ಯೋಜಿಸಲಾಗಿದೆ. ಆರಂಭದಲ್ಲಿ 10 ಸಾವಿರದಿಂದ 20 ಸಾವಿರ ಕೆ.ಜಿಯಷ್ಟು ಹಿಟ್ಟು ಮಾರಾಟ ಮಾಡಲಾಗುತ್ತದೆ. ಆ ಬಳಿಕ ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಣೆಗೆ ಯೋಜಿಸಲಾಗಿದೆ.

Nandini batter
Photo By : Money Control

ಇದನ್ನೂ ಓದಿ » ಶಿವಮೊಗ್ಗದಲ್ಲಿ ರೈತರಿಗೆ ಮೂರು ತಿಂಗಳ ಸರ್ಟಿಫಿಕೇಟ್‌ ಕೋರ್ಸ್‌

ದೋಸೆ – ಇಡ್ಲಿ ಹಿಟ್ಟು 450 ಗ್ರಾಂ ಮತ್ತು 900 ಗ್ರಾಂ ಪ್ಯಾಕೆಟ್‌ಗಳಲ್ಲಿ ದೊರೆಯಲಿವೆ. ಇದರ ದರದ ಕುರಿತು ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಿದೆ. ಡೈರಿ ಉತ್ಪನ್ನಗಳು ಮತ್ತು ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ಬ್ರ್ಯಾಂಡ್‌ ಈಗ ದೋಸೆ – ಇಡ್ಲಿ ಹಿಟ್ಟು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಮತ್ತಷ್ಟು ಗ್ರಾಹಕರಿಗೆ ಹತ್ತಿರವಾಗಲಿದೆ.

Pace-College-Prajna.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment