ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಲಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಗೊಂದಲ ಉಂಟಾಗಿದೆ. ಇದರ ನಿವಾರಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗುತ್ತಿದೆ. ಈ ಸಂಬಂಧ ಶಾಸಕರ ಜೊತೆಗೆ ಗುರುವಾರ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರ ವಿಂಗಡಣೆ ಕುರಿತು ಗೊಂದಲ ಉಂಟಾಗಿದೆ. ಮೆಲನಾಡು ಭಾಗದಲ್ಲಿ ಕ್ಷೇತ್ರಗಳ ಸಂಖ್ಯೆಯಲ್ಲಿ ಅಸಮತೋಲನ ಉಂಟಾಗಿದೆ. ಇದನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದರು.