ಬೆಂಗಳೂರು: ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯ ಸೂರಗೊಂಡನಕೊಪ್ಪ ರೈಲ್ವೆ ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಪತ್ರ ಬರೆದಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಶ್ರೀ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಪ್ರಸ್ತಾಪಿಸಿದ್ದಾರೆ. ಸರ್ಕಾರ ಈ ನಿಲ್ದಾಣಗಳಿಗೆ ಸಂತರ ಹೆಸರು ನಾಮಕರಣ ಮಾಡಲು ಶಿಫಾರಸು ಮಾಡಿದ್ದು, ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಈ ರೈಲು ನಿಲ್ದಾಣಗಳು ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಈ ಶಿಫಾರಸನ್ನು ಅಂಗೀಕರಿಸಿ, ಮರು ನಾಮಕರಣದ ವಿಷಯವನ್ನು ಶೀಘ್ರ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡ ಬಿತ್ತು ರೆಂಬೆ, ನಾಗರಿಕ ಪ್ರಜ್ಞೆ ಮೆರೆದ ವಿದ್ಯಾರ್ಥಿಗಳು, ತಪ್ಪಿತು ಟ್ರಾಫಿಕ್ ಜಾಮ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






