| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 24 JUNE 2024
RAINFALL NEWS : ರಾಜ್ಯದ ವಿವಿಧೆಡೆ ಇವತ್ತು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Alert) ಹಾಗೂ ಆರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಆರೆಂಜ್, ಎಲ್ಲೆಲ್ಲಿ ಯಲ್ಲೊ ಅಲರ್ಟ್?
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜ ನಗರ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ.
![]()
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ
ಕರಾವಳಿಯ ಉದ್ದಕ್ಕೂ ತೀವ್ರ ಬಿರುಗಾಳಿಯ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಮೀನುಗಾರರು ಎಚ್ಚರ ವಹಿಸಬೇಕು. ಇನ್ನು, ಮಂಗಳವಾರವೂ ರಾಜ್ಯದ 14 ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ. ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಏಳು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ – ಇನ್ನು ಐದು ವರ್ಷಕ್ಕೆ 44 ಸಾವಿರ ಕಿ.ಮೀ ರೈಲ್ವೆ ಮಾರ್ಗಕ್ಕೆ ಕವಚ ತಂತ್ರಜ್ಞಾನ, ಏನಿದು ಟೆಕ್ನಾಲಜಿ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()