ರಾಜ್ಯದಲ್ಲಿ ಯಲ್ಲೋ ಅಲರ್ಟ್‌, ಭಾರಿ ಮಳೆ ಸಾಧ್ಯತೆ, ಎಷ್ಟು ದಿನ?

ಹವಾಮಾನ ವರದಿ: ರಾಜ್ಯಾದ್ಯಂತ ಜೂನ್ 2 ರಿಂದ 5 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆ ಹಳದಿ ಅಲರ್ಟ್ ಘೋಷಿಸಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಹೇಗಿರುತ್ತೆ ಮಳೆ?

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಜೂನ್ 2 ರಿಂದ 6 ರವರೆಗೆ ಗಂಟೆಗೆ 40–50 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

Rainfall-in-Shimoga-city

ದಕ್ಷಿಣ ಒಳನಾಡಿನಲ್ಲಿ ಜೂನ್ 2 ರಿಂದ 5 ರವರೆಗೆ ಗಂಟೆಗೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ಭಾಗಗಳಲ್ಲಿ ಜೂನ್ 2 ರಿಂದ 4 ರವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಪ್ರಕಟಣೆಯಲ್ಲಿ ತಿಳಿಸಿದೆ.