ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Covid 19 Vaccination Kan poster 1 1

ಬೆಂಗಳೂರು : ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವ ಸುರೇಶ್ ಕುಮಾರ್, ಕೊವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆ ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 28ರಂದು ಪ್ರಾಯೋಗಿಕ ಪರೀಕ್ಷೆ ನಿಗದಿಯಾಗಿತ್ತು. ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು ಮತ್ತು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment