ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021
ಇನ್ನು 15 ದಿನದೊಳಗೆ ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ವಿಧಾನಸಭೆಯಲ್ಲಿ ಗುಬ್ಬಿ ಶಾಸಕ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿದೆ. ಇದರಿಂದ ರೈತರು ತಮ್ಮ ಮನೆ ಬಳಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಕೂಡಲೆ ಸಮಿತಿ ರಚಿಸುವಂತೆ ಮನವಿ ಮಾಡಿದರು.
ವಾಸು ಅವರ ಮನವಿ ಕುರಿತು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬಗರ್ ಹುಕುಂ ಸಮಿತಿ ರಚನೆಯಾಗದ ವಿಧಾನಸಭೆ ಕ್ಷೇತ್ರಗಳಲ್ಲಿ ಇನ್ನು 15 ದಿನದಲ್ಲಿ, ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಭೆಗೆ ತಿಳಿಸಿದರು.