ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 JUNE 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನಾಯಕತ್ವ ಬದಲಾವಣೆ ವಿಚಾರ ಮುನ್ನಲೆಗೆ ಬಂದ ಬೆನ್ನಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇವತ್ತು ಬೆಳಗ್ಗೆ 5.30ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ 8 ಗಂಟೆ ಹೊತ್ತಿಗೆ ದೆಹಲಿ ತಲುಪಿದ್ದಾರೆ. ವಿಜಯೇಂದ್ರ ಅವರೊಂದಿಗೆ ಕೆಲವು ಬೆಂಬಲಿಗರು ದೆಹಲಿಗೆ ತೆರಳಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗುವುದಾಗಿ ತಿಳಿದು ಬಂದಿದೆ. ಈಗಾಗಲೆ ಅರುಣ್ ಸಿಂಗ್ ಅವರ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ.
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು, ನಾಯಕತ್ವ ಬದಲಾವಣೆ ಮಾಡಬೇಕು ಎಂದು ಸಚಿವ ಯೋಗೇಶ್ವರ್ ಮತ್ತು ಕೆಲವು ಬಿಜೆಪಿ ಮುಖಂಡರು ಹೈಕಮಾಂಡ್ ಮನವಿ ಮಾಡಿದ್ದರು. ಈ ಬೆಳವಣಿಗೆ ಬೆನ್ನಿಗೆ ವಿಜಯೇಂದ್ರ ದೆಹಲಿಗೆ ತೆರಳಿರುವುದು ಮಹತ್ವ ಪಡೆದುಕೊಂಡಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]