ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
STATE NEWS, 4 OCTOBER 2024 : ಚಾರಣಕ್ಕೆ (Trekking) ಹೋಗುವವರಿಗೆ ಅರಣ್ಯ ಇಲಾಖೆ ಆನ್‌ಲೈನ್‌ನಲ್ಲೇ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಿದೆ. ಇದಕ್ಕಾಗಿ ವೆಬ್‌ಸೈಟ್ ರೂಪಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ವೆಬ್‌ಸೈಟ್ ಉದ್ಘಾಟಿಸಿದರು.
ಕನಿಷ್ಠ 300 ಚಾರಣಿಗರಿಗೆ ಅವಕಾಶ
![]()
ಚಾರಣಕ್ಕೆ ಹೋಗುವವರು https://aranyavihaara.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಅವಕಾಶ ಕಲ್ಪಿಸಲಾಗುತ್ತದೆ.
![]()
ಈ ವೆಬ್‌ಸೈಟ್‌ನಲ್ಲಿ ರಾಜ್ಯದ ಎಲ್ಲ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್ ಸಿಗದವರು ಬೇರೆ ಚಾರಣಪಥವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
![]()
ಚಾರಣ ಪಥಗಳ ಟಿಕೆಟ್‌ಗಳನ್ನು ಕೆಲವು ಖಾಸಗಿ ಸಂಸ್ಥೆಗಳು ಖರೀದಿ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆ ಅಕ್ರಮ ತಡೆಗೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಭಾವಚಿತ್ರ ಸಹಿತ ಗುರುತಿನ ಚೀಟಿ ಅಪ್ ಲೋಡ್ ಮಾಡಿ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ 10-20 ಚಾರಣಿಗರಿಗೆ ಒಬ್ಬರಂತೆ ಗೈಡ್‌ಗಳನ್ನೂ ನಿಯೋಜಿಸಲಾಗುತ್ತದೆ. ಒಂದು ಫೋನ್ ನಂಬರ್‌ನಲ್ಲಿ 10 ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
![]()
ಪ್ರಸ್ತುತ ಕುಮಾರ ಪರ್ವತದಿಂದ ಸುಬ್ರಹ್ಮಣ್ಯ, ಬೀದಹಳ್ಳಿಯಿಂದ ಕುಮಾರ ಪರ್ವತ, ಬೀದಹಳ್ಳಿ -ಕುಮಾರ ಪರ್ವತ ಸುಬ್ರಹ್ಮಣ್ಯ, ಚಾಮರಾಜನಗರ – ನಾಗಮಲೈ, ತಲಕಾವೇರಿಯಿಂದ -ನಿಶಾನೆಮೊಟ್ಟೆ ಚಾರಣ ತಾಣಗಳಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ತಿಂಗಳ ಅಂತ್ಯದೊಳಗೆ 40 ಚಾರಣ ಪಥಗಳನ್ನು ಜಾಲತಾಣದಲ್ಲಿ ಸೇರಿಸಲಾಗುವುದು.
ವನ್ಯಜೀವಿ ಮತ್ತು ಬೋಟ್ ಸಫಾರಿಗೂ ಟಿಕೆಟ್ ಕಾಯ್ದಿರಿಸಲು ವೆಬ್‌ಸೈಟ್‌ನಲ್ಲಿ ಅವಕಾಶವಿದೆ. ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ ನಿಷೇಧಿಸಲಾಗುವುದು. ಸಿಕ್ಕಿ ಬಿದ್ದರೆ ದಂಡ ವಿಧಿಸಲಾಗುತ್ತದೆ.![]()
ಇದನ್ನೂ ಓದಿ » ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














